ರಾಹುಲ್ ಗಾಂಧಿ, ಅಮಿತ್ ಶಾ ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ಅಮಿತ್ ಶಾ ಮಾನಹಾನಿ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು!

ಜಾರ್ಖಂಡ್ ಹೈಕೋರ್ಟ್ ನಿರ್ದೇಶನದ ಪ್ರಕಾರ ಬೆಳಗ್ಗೆ 10.55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು

ಜಾರ್ಖಂಡ್: ಮತ್ತೊಂದು ಮಾನಹಾನಿ ಪ್ರಕರಣದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ.

2018 ರ ಚುನಾವಣಾ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಚೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ಜಾರ್ಖಂಡ್ ಹೈಕೋರ್ಟ್ ನಿರ್ದೇಶನದ ಪ್ರಕಾರ ಬೆಳಗ್ಗೆ 10.55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು. ಅವರು ಕೋರಿದ್ದ ಜಾಮೀನು ಮಂಜೂರಾಗಿದ್ದು, ಈಗ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತೇವೆ ಎಂದು ರಾಹುಲ್ ಪರ ವಕೀಲರು ಹೇಳಿದರು.

ಜೂನ್ 26 ರಂದು ಖುದ್ದು ಹಾಜರಾಗುವಂತೆ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಜಾರ್ಖಂಡ್ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಕಕ್ಷಿದಾರರು ನಿಗದಿತ ದಿನದಂದು ಹಾಜರಾಗಲು ಸಾಧ್ಯವಾಗುವುದಿಲ್ಲ. ಬದಲಿಗೆ ಆಗಸ್ಟ್ 6 ರಂದು ಹಾಜರಾಗಲು ಅವಕಾಶ ನೀಡುವಂತೆ ಜೂನ್ 10 ರಂದು ಕೇಳಿಕೊಂಡಿದ್ದರು.ಅವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತ್ತು.

2018 ರಲ್ಲಿ ಚೈಬಾಸಾದಲ್ಲಿ ನಡೆದ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪ್ರತಾಪ್ ಕುಮಾರ್ ಎಂಬ ವ್ಯಕ್ತಿ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ