ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ. ಚಿತ್ರ ಪರ್ವೀನ್ ನೇಗಿ 
ದೇಶ

ಮಹಾರಾಷ್ಟ್ರ, ಕರ್ನಾಟಕದಲ್ಲಿ "ಮತಗಳ್ಳತನ": ರಾಹುಲ್‌ ಗಾಂಧಿಯಿಂದ ಸ್ಫೋಟಕ ದಾಖಲೆ ಬಿಡುಗಡೆ; Video

ಕರ್ನಾಟಕದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ.

ನವದೆಹಲಿ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಗುರುವಾರ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಇಂದು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಹಿರಂಗಪಡಿಸಿದ ರಾಹುಲ್ ಗಾಂಧಿ ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದರು.

ಕರ್ನಾಟಕದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಇದು ದೇಶದಲ್ಲಿ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ.

ಮತಗಳ್ಳತನದ ವಿರುದ್ಧ ಶುಕ್ರವಾರ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಮತಗಳ್ಳತನದ ಸ್ಫೋಟಕ ದಾಖಲೆಯನ್ನು ರಾಹುಲ್‌ ಗಾಂಧಿ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.

ನಮ್ಮ ಪಕ್ಷವು ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೀರ್ಘಕಾಲದಿಂದ ಶಂಕಿಸಿತ್ತು ಮತ್ತು ಅಂತಿಮ ಫಲಿತಾಂಶ ಅವರ ಕೆಟ್ಟ ಭಯವನ್ನು ದೃಢಪಡಿಸಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

"ಮಹಾರಾಷ್ಟ್ರ ಫಲಿತಾಂಶ ವಿಧಾನಸಭಾ ಚುನಾವಣೆಯನ್ನು ನಮ್ಮಿಂದ ಕದ್ದಿದೆ ಎಂಬ ನಮ್ಮ ಅನುಮಾನವನ್ನು ದೃಢಪಡಿಸಿದೆ". "ಮೆಶಿನ್‌ ರಿಡೇಬಲ್‌ ಮತದಾರರ ಪಟ್ಟಿಯನ್ನು ನೀಡಲು ಚುನಾವಣಾ ಆಯೋಗ ನಿರಾಕರಿಸಿರುವುದು ಬಿಜೆಪಿಯೊಂದಿಗೆ ಅದು ಒಪ್ಪಂದ ಮಾಡಿಕೊಂಡಿರುವುದು ನಮಗೆ ಮನವರಿಕೆ ಮಾಡಿಕೊಟ್ಟಿದೆ" ಎಂದಿದ್ದಾರೆ.

ಅಂಕಿಅಂಶಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ

ಅಂಕಿಅಂಶಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ, ಕೇವಲ ಐದು ತಿಂಗಳೊಳಗೆ ಒಂದು ಕೋಟಿಗೂ ಹೆಚ್ಚು ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು.

ಐದು ವರ್ಷಗಳ ಅವಧಿಯಲ್ಲಿ ಸೇರಿಸಲಾದ ಮತದಾರರಿಗಿಂತ ಹೆಚ್ಚು ಮತದಾರರನ್ನು ಕೇವಲ ಐದು ತಿಂಗಳಲ್ಲಿ ಹಠಾತ್ ಸೇರಿಸಿದ್ದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು.

ಇನ್ನು ಕರ್ನಾಟಕದಲ್ಲಿ, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 6.5 ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಅಕ್ರಮವಾಗಿ ಚಲಾಯಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

"ಒಂದು ಲಕ್ಷಕ್ಕೂ ಹೆಚ್ಚು ಮತಗಳ 'ವೋಟ್ ಚೋರಿ' ಆಗಿದೆ". ಕಾಂಗ್ರೆಸ್ ಸತ್ಯ ಶೋಧನಾ ತಂಡವು ಆ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ನಕಲಿ ಮತದಾರರು, ಅಮಾನ್ಯ ವಿಳಾಸಗಳು ಮತ್ತು ಬೃಹತ್ ಸೇರ್ಪಡೆಗಳನ್ನು ಕಂಡುಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದರು.

ಮಹದೇವಪುರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ ‘40,009’ ಮತದಾರರಿದ್ದಾರೆ. ‘ಮನೆ ಸಂಖ್ಯೆ 0’ ಎಂಬ ಅಡ್ರೆಸ್ ಇರುವ ಹಲವರು ನೋಂದಾಯಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ, 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ ಆ ಸ್ಥಳಕ್ಕೆ ಭೇಟಿ ನೀಡಿದಾಗ, ಯಾರೂ ಅಲ್ಲಿ ವಾಸಿಸುತ್ತಿಲ್ಲ ಎಂದು ಗೊತ್ತಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಕಲಿ ವಿಳಾಸಗಳೊಂದಿಗೆ 40,000 ನಮೂದುಗಳು ಮತ್ತು ಯಾವುದೇ ಫೋಟೋಗಳಿಲ್ಲದ ಸುಮಾರು 4,000 ನೋಂದಾಯಿತ ಮತದಾರರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

ಜಿಲ್ಲಾ ಉಸ್ತುವಾರಿ ಸಚಿವರನ್ನು ಎಸಿ ಕೋಣೆಯಿಂದ ಹೊರ ಹಾಕಿ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಮಾಡಿ: ಸಿಎಂಗೆ ವಿಜಯೇಂದ್ರ ಆಗ್ರಹ

ಕರೂರ್ ಕಾಲ್ತುಳಿತದ ಬಗ್ಗೆ ವದಂತಿ: ಯೂಟ್ಯೂಬರ್ ಬಂಧನ; ಟಿವಿಕೆ ಕಾರ್ಯಕರ್ತರ ವಿರುದ್ಧ ಕೇಸ್

H1B ವೀಸಾ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯಾಗುತ್ತದೆ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಲುಟ್ನಿಕ್

ರಾಹುಲ್ ಗಾಂಧಿಗೆ ಜೀವ ಬೆದರಿಕೆ: ಬಿಜೆಪಿ ಕೊಲೆಗಡುಕ ಸಂಸ್ಕೃತಿ ಮುಖವಾಡಕ್ಕೆ ಹಿಡಿದ ಕೈಗನ್ನಡಿ; ಬಿ.ಕೆ ಹರಿಪ್ರಸಾದ್‌

SCROLL FOR NEXT