ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಮರಕ್ಕೆ ಬಸ್ ಡಿಕ್ಕಿ, ನಾಲ್ವರು ಮಹಿಳೆಯರು ಸೇರಿ ಐವರು ಸಾವು

ಸುಮಾರು 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಬಾರಾಬಂಕಿಯಿಂದ ಹೈದರ್ ಘರ್ ಗೆ ತೆರಳುತ್ತಿತ್ತು.

ಲಖನೌ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶುಕ್ರವಾರ ಬೆಳಗ್ಗೆ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌, ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.

ಪ್ರಯಾಣಿಕರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಬಾರಾಬಂಕಿಯಿಂದ ಹೈದರ್ ಘರ್ ಗೆ ತೆರಳುತ್ತಿತ್ತು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ, ಹರ್ಖ್ ಚೌರಾಹಾ ಬಳಿ, ಇದ್ದಕ್ಕಿದ್ದಂತೆ ಒಂದು ಪ್ರಾಣಿ, ಬಸ್ ಗೆ ಅಡ್ಡ ಬಂದಿದೆ. ಅದನ್ನು ತಪ್ಪಿಸುವ ಪ್ರಯತ್ನದಲ್ಲಿ, ಚಾಲಕ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮರ ಬಸ್ ಮೇಲೆ ಉರುಳಿ ಬಿದಿದ್ದೆ.

ಮರವು ತುಂಬಾ ದೊಡ್ಡದಾಗಿದ್ದರಿಂದ ಬಸ್ಸಿನ ಸಂಪೂರ್ಣ ಛಾವಣಿ ನಜ್ಜುಗುಜ್ಜಾಗಿದೆ. ಹತ್ತಿರದ ನಿವಾಸಿಗಳು ಮತ್ತು ದಾರಿಹೋಕರು ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಸ್ ಚಾಲಕ ಸಂತೋಷ್ ಸೋನಿ ಮತ್ತು ಬರಾಬಂಕಿಯ ಇನ್ಹೌನಾದ ರಕೀಬುಲ್ ನಿಶಾ(55) ಸೇರಿದಂತೆ ಐವರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT