ರಾಹುಲ್ ಗಾಂಧಿ  
ದೇಶ

SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ

ಬಿಜೆಪಿಗೆ 10-15 ಸ್ಥಾನಗಳು ಕಡಿಮೆಯಿದ್ದರೆ, ಮೋದಿ ಪ್ರಧಾನಿಯಾಗುತ್ತಿರಲಿಲ್ಲ, ಇಂಡಿಯಾ ಬ್ಲಾಕ್ ಸರ್ಕಾರ ಇರುತ್ತಿತ್ತು.

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಸಾಂಸ್ಥಿಕ ಕಳ್ಳತನ ಎಂದು ಕರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ಆಯೋಗವು ಬಡವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಉದ್ದೇಶದಿಂದ ಈ ಕಳ್ಳತನ ಮಾಡಲು ಬಿಜೆಪಿಯೊಂದಿಗೆ ಬಹಿರಂಗವಾಗಿ ಪಿತೂರಿ ನಡೆಸುತ್ತಿವೆ ಎಂದು ಆರೋಪಿಸಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿರುವ ವಿಡಿಯೊದಲ್ಲಿ ರಾಹುಲ್ ಗಾಂಧಿ, ಚುನಾವಣಾ ಆಯೋಗದ ಮತಕಳ್ಳತನವನ್ನು ನಾವು ಹಿಡಿದಿದ್ದೇವೆ ಎಂದು ಚುನಾವಣಾ ಆಯೋಗಕ್ಕೆ ತಿಳಿದಿರುವುದರಿಂದ ಬಿಹಾರದಲ್ಲಿ ಎಸ್‌ಐಆರ್ ನ್ನು ತಂದರು. ಭಾರತೀಯ ಚುನಾವಣಾ ಆಯೋಗ (ECI) ಮತ್ತು ಬಿಜೆಪಿ ಒಟ್ಟಿಗೆ ಸೇರಿಕೊಂಡು ಮತಕಳ್ಳತನದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಚುನಾವಣೆ ಸಮಯದಲ್ಲಿ ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಬಳಸಲಾಗುತ್ತಿದೆ ಎಂದು ಮತಕಳ್ಳತನ ಮಾದರಿಯನ್ನು ಎತ್ತಿ ತೋರಿಸಿದ್ದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನಡೆಸಿದ ತನಿಖೆಯನ್ನು ಮತ್ತು 2024 ರ ಲೋಕಸಭಾ ಚುನಾವಣೆ ಸಮಯದಲ್ಲಿ ಕರ್ನಾಟಕದ ವಿಧಾನಸಭಾ ಕ್ಷೇತ್ರದ ಅಂಕಿಅಂಶಗಳನ್ನು ವಿವರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಐದು ರೀತಿಯ ಕುತಂತ್ರ ಮೂಲಕ 1 ಲಕ್ಷಕ್ಕೂ ಹೆಚ್ಚು ಮತಗಳನ್ನು ಕದ್ದಿದ್ದಾರೆ ಎಂದು ರಾಹುಲ್ ಗಾಂಧಿಯವರು ವೀಡಿಯೊದಲ್ಲಿ ತಮ್ಮ ಹೇಳಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳನ್ನು ಕದ್ದಿದ್ದಾರೆ ಎಂದು ಅವರು ಹೇಳುತ್ತಾರೆ.

ಭಾರತದಲ್ಲಿ 100 ಕ್ಕೂ ಹೆಚ್ಚು ಅಂತಹ ಸ್ಥಾನಗಳಿವೆ. ಎಲ್ಲಾ ಕಡೆ ಮತಕಳ್ಳತನವಾಗಿದೆ. ಬಿಜೆಪಿಗೆ 10-15 ಸ್ಥಾನಗಳು ಕಡಿಮೆಯಿದ್ದರೆ, ಮೋದಿ ಪ್ರಧಾನಿಯಾಗುತ್ತಿರಲಿಲ್ಲ, ಇಂಡಿಯಾ ಬ್ಲಾಕ್ ಸರ್ಕಾರ ಇರುತ್ತಿತ್ತು ಎಂದು ಅವರು ವೀಡಿಯೊದಲ್ಲಿ ಹೇಳುತ್ತಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಂಡುಬರುವ ಐದು ರೀತಿಯ 'ಮತಕಳ್ಳತನ ಬಗ್ಗೆ ಮಾತನಾಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT