ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌: ಕಂಟೇನರ್, ಟ್ರಕ್, ಕಾರು ನಡುವೆ ಡಿಕ್ಕಿ, ನಾಲ್ವರು ಸಜೀವ ದಹನ

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಹರಿಪರ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೋರ್ಬಿ: ಗುಜರಾತ್‌ನ ಮೋರ್ಬಿ ಜಿಲ್ಲೆಯ ಹೆದ್ದಾರಿಯಲ್ಲಿ ಎರಡು ಭಾರೀ ವಾಹನಗಳು ಮತ್ತು ಒಂದು ಕಾರು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಹರಿಪರ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಂಗ್ ಸೈಡ್ ನಿಂದ ಹೆದ್ದಾರಿಗೆ ಪ್ರವೇಶಿಸಿದ ಕಂಟೇನರ್, ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ, ಬೆಂಕಿ ಹೊತ್ತಿಕೊಂಡಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ತ್ರಿಪಾಠಿ ಅವರು ಹೇಳಿದ್ದಾರೆ.

"ಪಕ್ಕದಲ್ಲಿ ಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಕಾರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡಿಕ್ಕಿಯಲ್ಲಿ ಟ್ರಕ್ ಕೂಡ ಬೆಂಕಿಗೆ ಆಹುತಿಯಾಗಿದೆ. ನಾಲ್ವರು ಸಜೀವ ದಹನವಾಗಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

ಮೃತರಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮತ್ತು ಟ್ರಕ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಸೇರಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

"ಜುನಾಗಢದ ಬೋರ್ಡಿಂಗ್ ಶಾಲೆಯ ವಿದ್ಯಾರ್ಥಿಗಳು ಕಚ್ ಜಿಲ್ಲೆಯ ತಮ್ಮ ಊರುಗಳಿಗೆ ಪ್ರಯಾಣಿಸುತ್ತಿದ್ದರು" ಎಂದು ತ್ರಿಪಾಠಿ ಹೇಳಿದರು.

"ಇತರ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ" ಎಂದು ಮೋರ್ಬಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಕಾರು ಪ್ರಯಾಣಿಕರಾದ ರುದ್ರ ಗುಜಾರಿಯಾ(15), ಜಮಿನ್ ಬಬಾರಿಯಾ (17) ಮತ್ತು ರಾಜಸ್ಥಾನದ ಬಿಕಾನೇರ್ ನಿವಾಸಿ ಶಿವರಾಮ್ ನಾಯ್ ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಮಾಲಿಯಾ ಮಿಯಾನಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೇ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ