ಸಾಂದರ್ಭಿಕ ಚಿತ್ರ 
ದೇಶ

ಪುಣೆ: ತರಬೇತಿ ನಿರತ ವಿಮಾನ ಪತನ, ಪೈಲಟ್ ಪಾರು

ರೆಡ್‌ಬರ್ಡ್ ಫ್ಲೈಟ್ ತರಬೇತಿ ಕೇಂದ್ರದ ವಿಮಾನವು, ತರಬೇತಿ ಹಾರಾಟ ಮುಗಿಸಿ ಲ್ಯಾಂಡ್ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಶನಿವಾರ ತರಬೇತಿ ನಿರತ ವಿಮಾನವೊಂದು ಪತನವಾಗಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರೆಡ್‌ಬರ್ಡ್ ಫ್ಲೈಟ್ ತರಬೇತಿ ಕೇಂದ್ರದ ವಿಮಾನವು, ತರಬೇತಿ ಹಾರಾಟ ಮುಗಿಸಿ ಲ್ಯಾಂಡ್ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

"ವಿಮಾನವನ್ನು ಹಾರಿಸುತ್ತಿದ್ದಾಗ, ಒಂದು ಟೈರ್‌ಗೆ ಹಾನಿಯಾಗಿರುವುದನ್ನು ಪೈಲಟ್ ಗಮನಿಸಿದರು. ಬಳಿಕ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಪೈಲಟ್ ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸಿದರು. ವಿಮಾನದ ಮುಂಭಾಗದ ಚಕ್ರ ಟಚ್‌ಡೌನ್ ನಂತರ ಕಳಚಿಕೊಂಡಿತು. ವಿಮಾನವು ಟ್ಯಾಕ್ಸಿವೇಯಿಂದ ದಾರಿ ತಪ್ಪಿ ವಿಮಾನ ನಿಲ್ದಾಣದ ಇನ್ನೊಂದು ಬದಿಗೆ ಪ್ರವೇಶಿಸಿತು" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅವರು ಹೇಳಿದರು. ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!