ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದ ಚರಂಡಿ ಬಳಿಯ ಪೊದೆಗಳಲ್ಲಿ ಸೋಮವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೋಯಿತ್ರಮ್ ಛೇದಕ ಬಳಿಯ ಪೊದೆಗಳಲ್ಲಿ ಬಟ್ಟೆಯಲ್ಲಿ ಸುತ್ತಿದ ಶಿಶುವಿನ ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ರಾಜೇಂದ್ರ ನಗರ ಪೊಲೀಸ್ ಠಾಣೆಯ ಉಸ್ತುವಾರಿ ನೀರಜ್ ಬಿರ್ಥಾರೆ ಅವರು ಹೇಳಿದ್ದಾರೆ.
ತನಿಖೆ ಆರಂಭಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಅವರು ಹೇಳಿದರು.
ಸ್ಥಳದ ಸುತ್ತಮುತ್ತಲಿನ ವಸತಿ ಪ್ರದೇಶಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಬಿರ್ಥಾರೆ ತಿಳಿಸಿದ್ದಾರೆ.
ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಶಿಶುವಿನ ಶವವನ್ನು ಬೇರೆ ಸ್ಥಳದಿಂದ ಇಲ್ಲಿಗೆ ತಂದು ಪೊದೆಗಳಲ್ಲಿ ಎಸೆಯಲಾಗಿದೆ ಎಂದು ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.