ವೇಣುಗೋಪಾಲ್‌ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ 
ದೇಶ

KC ವೇಣುಗೋಪಾಲ್‌ ಇದ್ದ ವಿಮಾನ ತುರ್ತು ಭೂ ಸ್ಪರ್ಶ; ಅದೃಷ್ಟದಿಂದ ಬದುಕುಳಿದಿದ್ದೇವೆ- ಸಂಸದ ಪೋಸ್ಟ್; Air India ಸ್ಪಷ್ಟನೆ

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆಯಿಂದ ವಿಮಾನಯಾನದ ಸುರಕ್ಷತೆಯ ಬಗ್ಗೆ ಕೆ.ಸಿ. ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಆತಂಕ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ತಿರುವನಂತಪುರದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಚೆನ್ನೈಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಹವಾಮಾನ ವೈಪರೀತ್ಯ, ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಏರ್ ಇಂಡಿಯಾ ‘ಏರ್‌ಬಸ್‌ ಎ320’ ವಿಮಾನವು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆಯಿಂದ ವಿಮಾನಯಾನದ ಸುರಕ್ಷತೆಯ ಬಗ್ಗೆ ಕೆ.ಸಿ. ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಆತಂಕ ವ್ಯಕ್ತಪಡಿಸಿದ್ದಾರೆ.

ಭಾನುವಾರ(ಆ.10)ರ ಸಂಜೆ ತಿರುವನಂತಪುರದಿಂದ ದೆಹಲಿಗೆ ಏರ್ ಇಂಡಿಯಾ ವಿಮಾನ AI2455 ಹೊರಟಿತ್ತು. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತು. ಜೊತೆಗೆ ಹವಾಮಾನವು ವೈಪರೀತ್ಯದಿಂದಾಗಿಯೂ ವಿಮಾನವನ್ನು ಚೆನ್ನೈನಲ್ಲಿ ತುರ್ತಾಗಿ ಇಳಿಸಲಾಯಿತು. ವಿಮಾನದಲ್ಲಿ ಸಂಸದರು ಸೇರಿದಂತೆ ನೂರಾರು ಪ್ರಯಾಣಿಕರು ಇದ್ದರು.

ತಿರುವನಂತಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI 2455 ನಾನು ಮತ್ತು ಹಲವರು ಸಂಸದರು ಮತ್ತು ನೂರಾರು ಪ್ರಯಾಣಿಕರಿದ್ದ ವಿಮಾನವು ದುರಂತಕ್ಕೀಡಾಗುವುದರಿಂದ ಸ್ವಲ್ಪದರಲ್ಲೇ ಬಚವಾಗಿದೆ. ವಿಮಾನವು ತಡವಾಗಿ ಹೊರಟಿತು. ನಂತರ ಪ್ರಯಾಣವು ಭಯಾನಕವಾಗಿತ್ತು.ವಿಮಾಮ ಟೇಕಾಫ್‌ ಆದ ಒಂದು ಗಂಟೆಯ ನಂತರ ವಿಮಾನದಲ್ಲಿ ಸಿಗ್ನಲ್ ಸಮಸ್ಯೆ ಇದೆ ಎಂದು ಪೈಲಟ್ ಹೇಳಿದರು. ನಂತರ ವಿಮಾನವನ್ನು ಚೆನ್ನೈಗೆ ತಿರುಗಿಸಲಾಯಿತು.

ತಾಂತ್ರಿಕ ದೋಷ ಇದ್ದರೂ, ವಿಮಾನವು ಎರಡು ಗಂಟೆಗಳ ಕಾಲ ವಿಮಾನ ನಿಲ್ದಾಣದ ಸುತ್ತಲೇ ಸುತ್ತುತ್ತಾ ಇತ್ತು. ಕೊನೆಗೆ ಲ್ಯಾಂಡಿಂಗ್ ಮಾಡಲು ಅನುಮತಿ ಸಿಕ್ಕತು ಆದರೆ, ಮೊದಲ ಬಾರಿ ಲ್ಯಾಂಡಿಂಗ್ ಮಾಡುವಾಗ ಅದೇ ರನ್ ವೇಯಲ್ಲಿ ಮತ್ತೊಂದು ವಿಮಾನ ಇತ್ತು. ಹೀಗಾಗಿ ಪೈಲಟ್ ಕೊನೆಯ ಕ್ಷಣದಲ್ಲಿ ವಿಮಾನವನ್ನು ಮತ್ತೆ ಟೇಕ್ ಆಫ್ ಮಾಡಿದರು. ಎರಡನೇ ಪ್ರಯತ್ನದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲಾಯಿತು, ಅದೃಷ್ಟದಿಂದ ಬದುಕುಳಿದೆʼ ಎಂದು ಕೆಸಿ ವೇಣುಗೋಪಾಲ್ ಎಕ್ಸ್‌ನಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ವಿಮಾನವು ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿದಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಪ್ರಯಾಣಿಕರನ್ನು ಆದಷ್ಟು ಬೇಗ ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಜತೆಗೆ, ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.

ವೇಣುಗೋಪಾಲ್ ಅವರೇ ಚೆನ್ನೈ ವಿಮಾನ ನಿಲ್ದಾಣದಲ್ಲಿ ಮೊದಲ ಲ್ಯಾಂಡಿಂಗ್ ಪ್ರಯತ್ನದ ಸಮಯದಲ್ಲಿ ಚೆನ್ನೈ ATC ಯಿಂದ ವಿಮಾನ ತಿರುಗಿಸುವ ಸೂಚನೆ ನೀಡಲಾಯಿತು, ರನ್‌ವೇಯಲ್ಲಿ ಮತ್ತೊಂದು ವಿಮಾನ ಇದ್ದ ಕಾರಣದಿಂದ ಅಲ್ಲ. ನಮ್ಮ ಪೈಲಟ್‌ಗಳು ಅಂತಹ ಸಂದರ್ಭಗಳನ್ನು ನಿರ್ವಹಿಸಲು ಉತ್ತಮ ತರಬೇತಿ ಪಡೆದಿದ್ದಾರೆ. ನಮ್ಮ ಪೈಲಟ್ ಗಳು ಹಾರಾಟದ ಉದ್ದಕ್ಕೂ ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಿದರು ಎಂದು ಸ್ಪಷ್ಟನೆ ನೀಡಿದೆ.

ವಿಮಾನವು ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿದಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಪ್ರಯಾಣಿಕರನ್ನು ಆದಷ್ಟು ಬೇಗ ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಜತೆಗೆ, ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.

ಆಗಸ್ಟ್ 10ರಂದು ತಿರುವನಂತಪುರದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ–AI2455 ವಿಮಾನದ ಸಿಬ್ಬಂದಿ ಶಂಕಿತ ತಾಂತ್ರಿಕ ದೋಷ ಮತ್ತು ಮಾರ್ಗಮಧ್ಯೆ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈಗೆ ಮಾರ್ಗ ಬದಲಾವಣೆ ಮಾಡಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಮೂಲಗಳ ಪ್ರಕಾರ, ವಿಮಾನವು ರಾತ್ರಿ 8 ಗಂಟೆಗೆ ತಿರುವನಂತಪುರದಿಂದ ಹೊರಟು ರಾತ್ರಿ 10.35ರ ಸುಮಾರಿಗೆ ಚೆನ್ನೈಗೆ ತಲುಪಬೇಕಿತ್ತು. ಪ್ರಯಾಣಿಕರ ಸಂಖ್ಯೆಯ ಬಗ್ಗೆ ವಿವರಗಳು ಲಭ್ಯವಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT