ಬಿಹೆಚ್ ಯು ಕ್ಯಾಂಪಸ್ 
ದೇಶ

ಎಂಬಿಬಿಎಸ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಬನಾರಸ್ ಹಿಂದೂ ವಿವಿಯ 3 ಮಾಜಿ ವಿದ್ಯಾರ್ಥಿಗಳ ಬಂಧನ

ಇಂದು ಬೆಳಗಿನ ಜಾವ 3:30 ರ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತರೊಂದಿಗೆ ಗ್ರಂಥಾಲಯದಿಂದ ತನ್ನ ಹಾಸ್ಟೆಲ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಕಾಶಿ: ಬನಾರಸ್ ಹಿಂದೂ ವಿಶ್ವವಿದ್ಯಾಲಯ(ಬಿಎಚ್‌ಯು)ದ ಆವರಣದೊಳಗೆ ಮಂಗಳವಾರ ಬೆಳಗಿನ ಜಾವ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿವಿಯ ಮೂವರು ಮಾಜಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 3:30 ರ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತರೊಂದಿಗೆ ಗ್ರಂಥಾಲಯದಿಂದ ತನ್ನ ಹಾಸ್ಟೆಲ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕಾಶಿ ವಲಯದ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಗೌರವ್ ಬನ್ಸ್ವಾಲ್ ಅವರು ಹೇಳಿದ್ದಾರೆ.

ಬನ್ಸ್ವಾಲ್ ಪ್ರಕಾರ, ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಯುವಕರು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ ಆಕೆಯ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ಸಹಪಾಠಿಯೊಬ್ಬರು ನೀಡಿದ ಲಿಖಿತ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಕಿರುಕುಳ ಮತ್ತು ಹಲ್ಲೆಗೆ ಸಂಬಂಧಿಸಿದ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

"ಮೂವರು ಆರೋಪಿಗಳು ಬಿಎಚ್‌ಯುನ ಮಾಜಿ ವಿದ್ಯಾರ್ಥಿಗಳಾಗಿದ್ದು, ಅವರನ್ನು ಬಂಧಿಸಲಾಗಿದೆ. ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಮತ್ತು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಬನ್ಸ್ವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್