ರಾಹುಲ್ ಗಾಂಧಿ 
ದೇಶ

ಬೀದಿ ನಾಯಿಗಳ ಬಗ್ಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ಮಾನವೀಯ, ವೈಜ್ಞಾನಿಕ ನೀತಿಗೆ ವಿರುದ್ಧವಾಗಿದೆ: ರಾಹುಲ್ ಗಾಂಧಿ

ನಗರದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿನ ಎಲ್ಲ ಬೀದಿ ನಾಯಿಗಳನ್ನು ಹಿಡಿದು, ಅವುಗಳನ್ನು ಆಶ್ರಯ ಕೇಂದ್ರಗಳಲ್ಲಿ ಇಡಬೇಕು ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ನಿರ್ಧಾರವು ಬೀದಿ ನಾಯಿಗಳನ್ನು ದಶಕಗಳ ಮಾನವೀಯ ಮತ್ತು ವೈಜ್ಞಾನಿಕ ವಿಧಾನಗಳಿಗೆ ವಿರುದ್ಧವಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.

ನಗರದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆದಷ್ಟು ಬೇಗ ಶಾಶ್ವತ ಆಶ್ರಯ ತಾಣಗಳಿಗೆ ನಾಯಿಘಳನ್ನು ಸ್ಥಳಾಂತರಿಸುವಂತೆ ನಿರ್ದೇಶಿಸಿದ ಒಂದು ದಿನದ ನಂತರ ರಾಹುಲ್ ಈ ಹೇಳಿಕೆ ನೀಡಿದ್ದಾರೆ.

ಬೀದಿ ನಾಯಿಗಳನ್ನು ರಕ್ಷಿಸಲು ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಮುಂದಾದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದು ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕಾರಣವಾಗಬಹುದು ಎಂದು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು ಎಚ್ಚರಿಕೆ ನೀಡಿದೆ.

'ದೆಹಲಿ-ಎನ್‌ಸಿಆರ್‌ನಿಂದ ಎಲ್ಲ ಬೀದಿ ನಾಯಿಗಳನ್ನು ತೆಗೆದುಹಾಕಬೇಕೆಂಬ ಸುಪ್ರೀಂ ಕೋರ್ಟ್‌ನ ನಿರ್ದೇಶನವು ದಶಕಗಳ ಮಾನವೀಯ, ವೈಜ್ಞಾನಿಕ ಬೆಂಬಲಿತ ನೀತಿಯಿಂದ ಹಿಂದಕ್ಕೆ ಸರಿದಿದೆ. ಈ ಧ್ವನಿರಹಿತ ಆತ್ಮಗಳನ್ನು ಅಳಿಸಲು ಅವು 'ಸಮಸ್ಯೆಗಳು' ಅಲ್ಲ. ಆಶ್ರಯಗಳು, ಸಂತಾನಶಕ್ತಿ ಹರಣ, ವ್ಯಾಕ್ಸಿನೇಷನ್ ಮತ್ತು ಸಮುದಾಯ ಆರೈಕೆಯು ಯಾವುದೇ ಕ್ರೌರ್ಯವಿಲ್ಲದೆ ಬೀದಿಗಳನ್ನು ಸುರಕ್ಷಿತವಾಗಿರಿಸಬಹುದು. ಇವುಗಳನ್ನು ಇತರೆಡೆಗೆ ಕಳುಹಿಸುವುದು ಕ್ರೂರ, ದೂರದೃಷ್ಟಿಯಿಲ್ಲದ ಮತ್ತು ನಮ್ಮಿಂದ ಕರುಣೆಯನ್ನು ಕಸಿದುಕೊಳ್ಳುತ್ತದೆ. ಸಾರ್ವಜನಿಕ ಸುರಕ್ಷತೆ ಮತ್ತು ಪ್ರಾಣಿ ಕಲ್ಯಾಣವು ಒಟ್ಟಿಗೆ ಹೋಗುವುದನ್ನು ನಾವು ಖಚಿತಪಡಿಸಿಕೊಳ್ಳಬಹುದು' ಎಂದು ರಾಹುಲ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬೀದಿ ನಾಯಿಗಳ ಕಡಿತದಿಂದಾಗಿ, ವಿಶೇಷವಾಗಿ ಮಕ್ಕಳಲ್ಲಿ ರೇಬೀಸ್ ರೋಗ ಹರಡುತ್ತಿರುವುದರಿಂದ 'ಅತ್ಯಂತ ಭೀಕರ' ಪರಿಸ್ಥಿತಿ ಉಂಟಾಗಿದೆ. ಕಾಲಾನಂತರದಲ್ಲಿ ನಾಯಿ ಆಶ್ರಯ ತಾಣಗಳನ್ನು ಹೆಚ್ಚಿಸಬೇಕಾಗುತ್ತದೆ. ಆರರಿಂದ ಎಂಟು ವಾರಗಳಲ್ಲಿ ಸುಮಾರು 5,000 ನಾಯಿಗಳ ಆಶ್ರಯ ತಾಣವನ್ನು ರಚಿಸುವ ಮೂಲಕ ಪ್ರಾರಂಭಿಸುವಂತೆ ದೆಹಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಘಟನೆಯು ಬೀದಿ ನಾಯಿಗಳನ್ನು ಹಿಡಿಯುವ ಪ್ರಯತ್ನಕ್ಕೆ ಅಡ್ಡಿಪಡಿಸಿದರೆ ಮತ್ತು ಅದು ನಮಗೆ ವರದಿಯಾದರೆ, ಅಂತಹವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರಾಣಿ ಕಾರ್ಯಕರ್ತರು ಮತ್ತು ಪ್ರೇಮಿಗಳು ಎಂದು ಕರೆಯಲ್ಪಡುವವರು ರೇಬಿಸ್‌ಗೆ ಬಲಿಯಾದ ಮಕ್ಕಳನ್ನು ಮರಳಿ ಕರೆತರಲು ಸಾಧ್ಯವಾಗುತ್ತದೆಯೇ ಎಂದು ಪೀಠ ಹೇಳಿದೆ.

ಆ ಮಕ್ಕಳಿಗೆ ಅವರು ಮತ್ತೆ ಜೀವ ತುಂಬುತ್ತಾರೆಯೇ? ಪರಿಸ್ಥಿತಿ ಅಗತ್ಯವಿದ್ದಾಗ, ನೀವು ಕಾರ್ಯನಿರ್ವಹಿಸಬೇಕು ಎಂದು ಅದು ಹೇಳಿದೆ.

ರಾಷ್ಟ್ರ ರಾಜಧಾನಿಯಲ್ಲಿ ಬೀದಿ ನಾಯಿ ಕಡಿತವು ರೇಬೀಸ್‌ಗೆ ಕಾರಣವಾದ ಬಗ್ಗೆ ಜುಲೈ 28 ರಂದು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT