ಪ್ರಾತಿನಿಧಿಕ ಚಿತ್ರ 
ದೇಶ

ಜಾರ್ಖಂಡ್‌: ಪೊಲೀಸರಂತೆ ವರ್ತಿಸಿ ತಂಗಿ ಎದುರೇ ಅಕ್ಕನ ಮೇಲೆ 'ಅತ್ಯಾಚಾರ', ಇಬ್ಬರ ಬಂಧನ!

ಇಬ್ಬರೂ ಸೋದರಿಯರನ್ನು ಚೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಇಬ್ಬರು ವ್ಯಕ್ತಿಗಳು ಅಕ್ಕನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮೇದಿನಿನಗರ (ಜಾರ್ಖಂಡ್): ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 22 ವರ್ಷದ ಮಹಿಳೆ ಮೇಲೆ ಆಕೆಯ ತಂಗಿಯ ಮುಂದೆಯೇ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪಂಜಾಬ್‌ಗೆ ಹೋಗಲು ರೈಲಿಗಾಗಿ ತಾನು ಮತ್ತು ತನ್ನ ಸಹೋದರಿ ಡಾಲ್ಟನ್‌ಗಂಜ್ ನಿಲ್ದಾಣದಲ್ಲಿ ಕಾಯುತ್ತಿದ್ದೆವು. ಆಗ ಪೊಲೀಸರಂತೆ ನಟಿಸಿದ ಇಬ್ಬರು ವ್ಯಕ್ತಿಗಳು ತಮ್ಮನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ಸೋಮವಾರ ಪೊಲೀಸರಿಗೆ ದೂರು ನೀಡಿರುವುದಾಗಿ ಪಲಮು ಪೊಲೀಸ್ ವರಿಷ್ಠಾಧಿಕಾರಿ ರೀಷ್ಮಾ ರಮೇಶನ್ ಹೇಳಿದ್ದಾರೆ.

'ಇಬ್ಬರೂ ಸೋದರಿಯರನ್ನು ಚೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಇಬ್ಬರು ವ್ಯಕ್ತಿಗಳು ಅಕ್ಕನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ' ಎಂದು ಎಸ್ಪಿ ಹೇಳಿದರು.

ಕೃತ್ಯದ ನಂತರ, ಇಬ್ಬರು ಆರೋಪಿಗಳು ಸೋದರಿಯರನ್ನು ತಮ್ಮ ಮೋಟಾರ್ ಸೈಕಲ್‌ನಲ್ಲಿ ಕರೆದೊಯ್ಯುತ್ತಿದ್ದಾಗ, ತಂಗಿ ದ್ವಿಚಕ್ರ ವಾಹನದಿಂದ ಹಾರಿದ್ದಾರೆ ಮತ್ತು ಕಿರುಚಲು ಪ್ರಾರಂಭಿಸಿದ್ದಾರೆ. ಆಗ ಸ್ಥಳೀಯರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ' ಎಂದು ರಮೇಶ್ ಹೇಳಿದರು.

ದೂರುದಾರರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video