ಮಾಜಿ CEC ರಾಜೀವ್ ಕುಮಾರ್ 
ದೇಶ

'ಮತಗಳ್ಳತನ' ಆರೋಪ ಬೆನ್ನಲ್ಲೇ ದೇಶ ತೊರೆದ್ರಾ ಮಾಜಿ CEC ರಾಜೀವ್ ಕುಮಾರ್?

ರಾಜೀವ್ ಕುಮಾರ್ ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ವದಂತಿಗಳನ್ನು ಅವರ ನಿಕಟವರ್ತಿಗಳು ತಳ್ಳಿ ಹಾಕಿದ್ದಾರೆ.

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 'ಮತಗಳ್ಳತನ' ಆರೋಪ ದೇಶಾದ್ಯಂತ ಭಾರಿ ಚರ್ಚೆ, ವಿವಾದಕ್ಕೆ ಕಾರಣವಾಗಿರುವಂತೆಯೇ ಮಾಜಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೇಶ ತೊರೆದಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

2024ರ ಲೋಕಸಭಾ ಚುನಾವಣೆ ರಾಜೀವ್ ಕುಮಾರ್ ಅವರ ಮೇಲುಸ್ತುವಾರಿಯಲ್ಲಿ ನಡೆದಿತ್ತು. ಈ ವರ್ಷದ ಫೆಬ್ರವರಿಯಲ್ಲಿ ಅವರು ಕಚೇರಿಯನ್ನು ತೊರೆದಿದ್ದರು.

ರಾಜೀವ್ ಕುಮಾರ್ ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ವದಂತಿಗಳನ್ನು ಅವರ ನಿಕಟವರ್ತಿಗಳು ತಳ್ಳಿ ಹಾಕಿದ್ದಾರೆ. ಮಾಜಿ ಮುಖ್ಯ ಚುನಾವಣಾ ಆಯುಕ್ತರು ಭಾರತದಲ್ಲಿಯೇ ಇದ್ದಾರೆ. ಮಾಲ್ಟಾದಲ್ಲಿ ನೆಲೆಸಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ರಾಜೀವ್ ಕುಮಾರ್ ಚುನಾವಣಾ ಆಯೋಗದ ಮುಖ್ಯಸ್ಥರಾಗಿದ್ದಾಗ ಕರ್ನಾಟಕ, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ನಡೆದ ಚುನಾವಣೆಯಲ್ಲಿ "ಮತ ಕಳ್ಳತನ'ವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT