ಮೊಹ್ಲಾ: ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾ ಪಡೆ ಮೇಲೆ ಮದನ್‌ವಾಡ ಪ್ರದೇಶದ ಕಾಡಿನಲ್ಲಿ ನಕ್ಸಲರು ಗುಂಡು ಹಾರಿಸಿದ್ದಾರೆ. ನಂತರ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್ ಕೌಂಟರ್ ಬಳಿಕ ಇಬ್ಬರು ನಕ್ಸಲರ ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.