ಹುಮಾಯೂನ್ ಸಮಾಧಿ ಆವರಣದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿತ 
ದೇಶ

ದೆಹಲಿಯ ಹುಮಾಯೂನ್ ಸಮಾಧಿ ಆವರಣದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು 6 ಮಂದಿ ಸಾವು; 7 ಮಂದಿ ರಕ್ಷಣೆಗೆ ಹರಸಾಹಸ!

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಹುಮಾಯೂನ್ ಸಮಾಧಿ ಆವರಣದಲ್ಲಿ ಮಸೀದಿಯ ಬಳಿಯ ಕೋಣೆಯ ಮೇಲ್ಛಾವಣಿ ಕುಸಿದು 6 ಮಂದಿ ಸಾವನ್ನಪ್ಪಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಹುಮಾಯೂನ್ ಸಮಾಧಿ ಆವರಣದಲ್ಲಿ ಮಸೀದಿಯ ಬಳಿಯ ಕೋಣೆಯ ಮೇಲ್ಛಾವಣಿ ಕುಸಿದು 6 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ 7 ಮಂದಿ ಸಿಲುಕಿಕೊಂಡಿದ್ದು ಅವರ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಲ್ಲಿಯವರೆಗೆ 11ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಪೊಲೀಸ್ ಅಧಿಕಾರಿಗಳ ಜೊತೆಗೆ ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ತಲುಪಿದ್ದಾರೆ. ಎನ್‌ಡಿಆರ್‌ಎಫ್ ತಂಡ ಕೂಡ ಸ್ಥಳಕ್ಕೆ ತಲುಪಿದೆ.

ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಅಗ್ನಿಶಾಮಕ ದಳ ಮತ್ತು NDRF ತಂಡಗಳು ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಇಲ್ಲಿಯವರೆಗೆ 11 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಸಂಜೆ 4.30 ರ ಸುಮಾರಿಗೆ ಗುಮ್ಮಟದ ಒಂದು ಭಾಗ ಬಿದ್ದಿದೆ ಎಂದು ವರದಿಯಾಗಿದೆ. ಆದಾಗ್ಯೂ, ಗುಮ್ಮಟ ಬಿದ್ದಿಲ್ಲ. ಮಸೀದಿಯ ಬಳಿ ನಿರ್ಮಿಸಲಾದ ಕೋಣೆಯ ಛಾವಣಿ ಬಿದ್ದಿದೆ.

ಹುಮಾಯೂನ್ ಸಮಾಧಿಯನ್ನು 16ನೇ ಶತಮಾನದಲ್ಲಿ ನಿರ್ಮಾಣ

ಹುಮಾಯೂನ್ ಸಮಾಧಿಯನ್ನು 1565-1572ರ ನಡುವೆ ದೆಹಲಿಯಲ್ಲಿ ನಿರ್ಮಿಸಲಾಯಿತು. ಇದನ್ನು ಹುಮಾಯೂನ್ ಪತ್ನಿ ಹಾಜಿ ಬೇಗಂ ನಿರ್ಮಿಸಿದರು. ಈ ಸಮಾಧಿ ಮೊಘಲ್ ವಾಸ್ತುಶಿಲ್ಪದ ಮೊದಲ ಪ್ರಮುಖ ಉದಾಹರಣೆಯಾಗಿದೆ. ತಾಜ್ ಮಹಲ್ ನಂತಹ ಇತರ ಸ್ಮಾರಕಗಳನ್ನು ಇದರಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗಿದೆ. ಸಮಾಧಿಯನ್ನು ಕೆಂಪು ಮರಳುಗಲ್ಲು ಮತ್ತು ಬಿಳಿ ಅಮೃತಶಿಲೆಯಿಂದ ನಿರ್ಮಿಸಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ, 2007-2013ರಲ್ಲಿ ಆಗಾ ಖಾನ್ ಟ್ರಸ್ಟ್ ದೊಡ್ಡ ಪ್ರಮಾಣದ ನವೀಕರಣವನ್ನು ಕೈಗೊಂಡಿತು. ಪರಿಸರ ಮಾಲಿನ್ಯ ಮತ್ತು ಹವಾಮಾನ ಪರಿಣಾಮಗಳಿಂದಾಗಿ ಕೆಲವು ಭಾಗಗಳು ಹಾನಿಗೊಳಗಾಗಿದ್ದರೂ, ಸಮಾಧಿ ಇನ್ನೂ ಬಲಿಷ್ಠವಾಗಿದೆ ಮತ್ತು ಇಂದಿಗೂ ಉತ್ತಮ ಸ್ಥಿತಿಯಲ್ಲಿದೆ. ಈ ಘಟನೆಯಲ್ಲಿ ಸಮಾಧಿ ಕುಸಿದಿಲ್ಲ. ಆದರೆ ಸಮಾಧಿ ಆವರಣದೊಳಗಿನ ಕೋಣೆಯ ಛಾವಣಿ ಕುಸಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT