ಪ್ರಧಾನಿ ಮೋದಿ 
ದೇಶ

ಈ ದೀಪಾವಳಿಗೆ ಡಬಲ್ ಧಮಾಕ: ಹಬ್ಬಕ್ಕೆ ಜನರಿಗೆ ಪ್ರಧಾನಿ ಮೋದಿ ಗಿಫ್ಟ್..! ಏನದು..?

ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಕಳೆದ 8 ವರ್ಷಗಳಲ್ಲಿ, ನಾವು ಜಿಎಸ್‌ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ಮುಂದುವರೆದು ಮತ್ತಷ್ಟು ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ.

ನವದೆಹಲಿ: ಈ ಬಾರಿ ದೀಪಾವಳಇ ಹಬ್ಬಕ್ಕೆ ಭರ್ಜರಿ ಉಡುಗೊರೆಯೊಂದನ್ನು ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದಾರೆ.

ಈ ಬಾರಿ ಡಬಲ್‌ ದೀಪಾವಳಿ ಎಂದಿರುವ ಮೋದಿ ಮೋದಿಯವರು, ಜಿಎಸ್‌ಟಿಯಲ್ಲಿ ಮಹತ್ವದ ಸುಧಾರಣೆ ತಂದು ತೆರಿಗೆ ಹೊರೆ ಕಡಿಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಕಳೆದ 8 ವರ್ಷಗಳಲ್ಲಿ, ನಾವು ಜಿಎಸ್‌ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ಮುಂದುವರೆದು ಮತ್ತಷ್ಟು ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದರು.

ತೆರಿಗೆ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವುದು, ಅಗತ್ಯ ಮತ್ತು ದಿನನಿತ್ಯದ ವಸ್ತುಗಳ ಮೇಲಿನ ಜಿಎಸ್‌ಟಿ ದರಗಳನ್ನು ಕಡಿಮೆ ಮಾಡುವುದರ ಮೇಲೆ ಗಮನ ನೀಡಲಾಗುತ್ತಿದೆ. ಈ ಬಗ್ಗೆ ರಾಜ್ಯಗಳೊಂದಿಗೆ ಮಾತನಾಡಿದ್ದೇವೆ ನಮ್ಮ ಕೈಗಾರಿಕೆಗಳು ದೊಡ್ಡ ಲಾಭವನ್ನು ಪಡೆಯುತ್ತವೆ. ದೈನಂದಿನ ವಸ್ತುಗಳು ಅಗ್ಗವಾಗುತ್ತವೆ. ಇದು ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡುತ್ತದೆ. ಈ ಮೂಲಕ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ನಮ್ಮ ಆರ್ಥಿಕತೆಯನ್ನು ಬಲಪಡಿಸುವುಕ್ಕೆ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು.

ಜೊತೆಗೆ ಪ್ರಧಾನಿ ಮೋದಿಯವರು ಪ್ರಧಾನ ಮಂತ್ರಿ ವಿಕಸಿತ್‌ ಭಾರತ್ ರೋಜ್‌ಗಾರ್ ಯೋಜನೆಯನ್ನೂ ಘೋಷಿಸಿದರು. ಈ ಯೋಜನೆಯಡಿಯಲ್ಲಿ, ಖಾಸಗಿ ವಲಯದಲ್ಲಿ ಮೊದಲ ಉದ್ಯೋಗ ಪಡೆಯುವವರಿಗೆ ಸರ್ಕಾರದಿಂದ 15,000 ರೂ. ಸಿಗಲಿದೆ.

ಜಿಎಸ್‌ಟಿ ಮಂಡಳಿಯ ಮುಂದಿನ ಸಭೆಯು ಸೆಪ್ಟೆಂಬರ್ 9ರಂದು ನಡೆಯಲಿದೆ. ಪ್ರಸ್ತುತ, ನಮ್ಮ ದೇಶದಲ್ಲಿ ಶೇ.0.5, ಶೇ.12, ಶೇ.18 ಮತ್ತು ಶೇ.28 ಜಿಎಸ್‌ಟಿ ಸ್ಲ್ಯಾಬ್‌ಗಳಿವೆ. ದೇಶದ ಜನರ ಖರೀದಿ ಶಕ್ತಿಯನ್ನು ಹೆಚ್ಚಿಸುವ ಗುರಿಯೊಂದಿಗೆ, ಕೇಂದ್ರ ಸರ್ಕಾರವು ವಿವಿಧ ವರ್ಗಗಳ ಸರಕುಗಳು, ಉತ್ಪನ್ನಗಳು ಮತ್ತು ಸೇವೆಗಳ ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡುವತ್ತ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ಅಸ್ಥಿರಂಧ್ರತೆ (Osteoporosis) ಚಿಕಿತ್ಸೆಯಲ್ಲಿ ಹೊಸ ಬೆಳಕು: ಮೂಳೆ ಬಲದ ಮೂಲ ರಹಸ್ಯ ಪತ್ತೆ (ಕುಶಲವೇ ಕ್ಷೇಮವೇ)

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಗಳ ಭರ್ಜರಿ ಜಯ

Israel -Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ

'ದುರ್ಗಾ ಪೂಜೆ ವೇಳೆ ನಟಿ Kajol ಖಾಸಗಿ ಭಾಗ ಮುಟ್ಟಿ ಅನುಚಿತ ವರ್ತನೆ'; ಸಾಮಾಜಿಕ ಜಾಲತಾಣದಲ್ಲಿ Video ವೈರಲ್, ಅಸಲೀಯತ್ತೇನು?

SCROLL FOR NEXT