ಅಪಘಾತ 
ದೇಶ

ಮಧ್ಯಪ್ರದೇಶ: ಮಿನಿ ಟ್ರಕ್‌ಗೆ ಮಿನಿ ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಗುಜರಾತ್ ಮೂಲದ ಸಂಗೀತ ತಂಡವನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಮಿನಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ.

ಶಿವಪುರಿ: ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯ ಹೆದ್ದಾರಿಯಲ್ಲಿ ಶನಿವಾರ ಮಿನಿ ಟ್ರಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 46ರಲ್ಲಿ ಗುಜರಾತ್ ಮೂಲದ ಸಂಗೀತ ತಂಡವನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಮಿನಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಮಿನಿ ಬಸ್ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಸರ್ವಾಯ ಪೊಲೀಸ್ ಠಾಣೆಯ ಗೃಹ ಅಧಿಕಾರಿ(SHO) ಅರವಿಂದ್ ಚಾರಿ ಅವರು ಪಿಟಿಐಗೆ ತಿಳಿಸಿದ್ದಾರೆ.

ಮಿನಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮತ್ತೊಂದು ಲೈನ್ ಗೆ ಪ್ರವೇಶಿಸಿ ಮಿನಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ಸಂಗೀತ ತಂಡದ ಗಾಯಕ ಹಾರ್ದಿಕ್ ಡೇವ್(37), ರಾಜಾ ಠಾಕೂರ್(28), ಅಂಕಿತ್ ಠಾಕೂರ್ (17) ಮತ್ತು ರಾಜೇಂದ್ರ ಸೋಲಂಕಿ(47) ಎಂದು ಗುರುತಿಸಲಾಗಿದ್ದು, ಎಲ್ಲರೂ ಬ್ಯಾಂಡ್‌ನ ಸದಸ್ಯರಾಗಿದ್ದಾರೆ ಎಂದು SHO ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

17 ಜನರಿದ್ದ ಮಿನಿ ಬಸ್‌ನ ಚಾಲಕ ನಿದ್ರೆಗೆ ಜಾರಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಹಾರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಇರಾನ್ ಹೊಸ ಶುಲ್ಕ: ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ಸೌಲಭ್ಯ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!