ನವೀನ್ ಪಟ್ನಾಯಕ್ 
ದೇಶ

Naveen Patnaik: ಒಡಿಶಾ ಮಾಜಿ ಸಿಎಂ ಅನಾರೋಗ್ಯ, ಆಸ್ಪತ್ರೆಗೆ ದಾಖಲು!

ನವೀನ್ ಪಟ್ನಾಯಕ್ ಅವರು ಕೆಲವು ತಿಂಗಳ ಹಿಂದೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಭುವನೇಶ್ವರ: ಒಡಿಶಾ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದ್ದು, ಒಡಿಶಾದ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು (ಭಾನುವಾರ) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

78 ವರ್ಷದ ಬಿಜೆಡಿ ಮುಖ್ಯಸ್ಥ ಪಟ್ನಾಯಕ್ ಅವರು ಶನಿವಾರ ರಾತ್ರಿ ಅಸ್ವಸ್ಥರಾಗಿದ್ದರು. ಕೂಡಲೇ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದರು. ಪಟ್ನಾಯಕ್ ಅವರ ಆರೋಗ್ಯ ಕುರಿತು ಆಸ್ಪತ್ರೆ ಶೀಘ್ರದಲ್ಲೇ ಬುಲೆಟಿನ್ ಬಿಡುಗಡೆ ಮಾಡಲಿದೆ ಎಂದು ಬಿಜೆಡಿ ಹಿರಿಯ ನಾಯಕ ನವೀನ್ ನಿವಾಸ್ ಹೇಳಿದ್ದಾರೆ.

ನವೀನ್ ಪಟ್ನಾಯಕ್ ಅವರು ಕೆಲವು ತಿಂಗಳ ಹಿಂದೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪಟ್ನಾಯಕ್ ಅವರು ಜೂನ್ 20ರಂದು ಮುಂಬೈಗೆ ತೆರಳಿದ್ದರು.

ಜೂನ್ 22ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜುಲೈ 7ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ವಯೋ ಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!

ಸತತ 2ನೇ ದಿನವೂ Indian Stock Market ಭಾರಿ ಏರಿಕೆ, 24 ಸಾವಿರ ಅಂಕ ಗಡಿ ದಾಟಿದ Nifty50

ಭೂಕುಸಿತದ ಎಫೆಕ್ಟ್: ಜುಲೈ 17 ರವರೆಗೆ ಮುಂಬೈ-ಪುಣೆ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ; 30 ರೈಲುಗಳು ರದ್ದು

ಅದ್ಧೂರಿಯಾಗಿ ನಡೆಯಲಿದೆ ಶರ್ಮಿಳಾ ಮಾಂಡ್ರೆ ಮದುವೆ; ದಿನಾಂಕ, ಸ್ಥಳ ಫಿಕ್ಸ್; ಗ್ಲಾಮರಸ್‌ ನಟಿಯ ಮ್ಯಾರೇಜ್ ಎಲ್ಲಿ ಗೊತ್ತಾ?