ಮುಂಬೈ: ಮಹಾರಾಷ್ಟ್ರ ರಾಜ್ಯದ ಮುಂಬೈ ಮತ್ತು ನೆರೆಯ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಮುಂಬೈ ಮಹಾನಗರ ಪಾಲಿಕೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ವಿಮಾನ ನಿಲ್ದಾಣದ ವಕ್ತಾರರು, ಒಂಬತ್ತು ವಿಮಾನಗಳು ನಿಲ್ದಾಣಕ್ಕೆ ಇಳಿಯುವ ಮೊದಲು ಹಲವು ಬಾರಿ ಸುತ್ತು ಹಾಕಿದ್ದವು. ಒಂದು ವಿಮಾನವನ್ನು ಭಾರೀ ಮಳೆಯಿಂದಾಗಿ ಮಧ್ಯಾಹ್ನ 12 ಗಂಟೆಯವರೆಗೆ ಸೂರತ್‌ಗೆ ತಿರುಗಿಸಲಾಯಿತು.
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ನಿವಾಸಿಗಳು ಅಗತ್ಯವಿದ್ದರೆ ಮಾತ್ರ ಜನರು ಮನೆಯಿಂದ ಹೊರಹೋಗುವಂತೆ ಮನವಿ ಮಾಡಿದೆ. ಮೀನುಗಾರರು ಅರೇಬಿಯನ್ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸತತ ಮೂರನೇ ದಿನದಿಂದ ಭಾರೀ ಮಳೆಯ ಕಾರಣದಿಂದ ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡವು.
ಅಂಧೇರಿ ಸಬ್‌ವೇ ಮತ್ತು ಲೋಖಂಡ್‌ವಾಲಾ ಕಾಂಪ್ಲೆಕ್ಸ್‌ನಂತಹ ಕೆಲವು ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದ್ದು, ಜನ ಹಾಗೂ ವಾಹನ ಸಂಚಾರದ ಮೇಲೆ ಪರಿಣಾಮ ಬೀರಿದೆ. ಮಹಾನಗರದ ಜೀವನಾಡಿ ಎಂದು ಪರಿಗಣಿಸಲಾದ ಸ್ಥಳೀಯ ರೈಲುಗಳು 8 ರಿಂದ 10 ನಿಮಿಷಗಳ ಕಾಲ ತಡವಾಗಿ ಓಡುತ್ತಿದ್ದವು, ಆದರೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂದರು ಮಾರ್ಗದ ಕೆಲವು ತಗ್ಗು ಪ್ರದೇಶಗಳಲ್ಲಿ ಹಳಿಗಳ ಮೇಲೆ ನೀರು ಸಂಗ್ರಹವಾಗಿದ್ದರಿಂದ, ಕುರ್ಲಾ ಮತ್ತು ತಿಲಕ್ ನಗರ ನಿಲ್ದಾಣಗಳ ನಡುವೆ ಹಳಿ ಬದಲಾಯಿಸುವ ಪಾಯಿಂಟ್ ಗಳಲ್ಲಿ ನೀರು ಸಂಗ್ರಹವಾದ್ದರಿಂದ ಮಧ್ಯ ರೈಲ್ವೆ ಮಾರ್ಗದಲ್ಲಿನ ಉಪನಗರ ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಕೆಲವು ಭಾಗಗಳಲ್ಲಿ ಬಿದ್ದ ಮಳೆಯು ಗೋಚರತೆಯ ಮೇಲೆ ಪರಿಣಾಮ ಬೀರಿ ವಾಹನ ಸಂಚಾರವನ್ನು ನಿಧಾನಗೊಳಿಸಲಾಗಿದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಸಂಸ್ಥೆಯ ಬಸ್ ಸೇವೆಗಳ ಯಾವುದೇ ಮಾರ್ಗಗಳನ್ನು ಬದಲಾಯಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ, ಮುಂಬೈ ಮತ್ತು ನೆರೆಯ ಥಾಣೆ ಮತ್ತು ರಾಯಗಢ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಇಂದು ಮತ್ತು ನಾಳೆ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.
ಇಂದು ರತ್ನಗಿರಿ ಜಿಲ್ಲೆಗೆ ರೆಡ್ ಅಲರ್ಟ್, ಇಂದು ಮತ್ತು ನಾಳೆ ಸಿಂಧುದುರ್ಗಕ್ಕೆ ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ. ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಉಲ್ಲೇಖಿಸಿ, ಮಧ್ಯಾಹ್ನದ ಅವಧಿಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ಬಿಎಂಸಿ ಆಯುಕ್ತ ಭೂಷಣ್ ಗಗ್ರಾನಿ ತಿಳಿಸಿದ್ದಾರೆ.
ತುರ್ತು ಸಂದರ್ಭಗಳಲ್ಲಿ ನಿವಾಸಿಗಳು ತಮ್ಮ ವಿಪತ್ತು ನಿಯಂತ್ರಣ ಸಹಾಯವಾಣಿ 1916 ನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ಮೊನ್ನೆ ಶನಿವಾರದಿಂದ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದೆ. ದ್ವೀಪ ನಗರ, ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಕೇವಲ ಒಂದು ಗಂಟೆಯಲ್ಲಿ ಕ್ರಮವಾಗಿ 37 ಮಿಮೀ, 39 ಮಿಮೀ ಮತ್ತು 29 ಮಿಮೀ ಸರಾಸರಿ ಮಳೆಯಾಗಿದೆ.
ಪೂರ್ವ ಉಪನಗರದ ಚೆಂಬೂರ್‌ನಲ್ಲಿ ಒಂದು ಗಂಟೆಯ ಅವಧಿಯಲ್ಲಿ ಅತಿ ಹೆಚ್ಚು 65 ಮಿಮೀ ಮಳೆಯಾಗಿದ್ದು, ಶಿವಾಜಿ ನಗರದಲ್ಲಿ 50 ಮಿಮೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳಲ್ಲಿ, ಮುಂಬೈಯಲ್ಲಿ ಸರಾಸರಿ 54.58 ಮಿ.ಮೀ ಮಳೆಯಾಗಿದ್ದು, ಪೂರ್ವ ಉಪನಗರಗಳಲ್ಲಿ 72.61 ಮಿ.ಮೀ ಮತ್ತು ಪಶ್ಚಿಮ ಉಪನಗರಗಳಲ್ಲಿ 65.86 ಮಿ.ಮೀ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅವಧಿಯಲ್ಲಿ ಹಲವಾರು ಪ್ರದೇಶಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ. ನಾಂದೇಡ್‌ನಲ್ಲಿ ಭಾರಿ ಮಳೆಯ ನಂತರ ಸಿಲುಕಿಕೊಂಡಿದ್ದ 200 ಕ್ಕೂ ಹೆಚ್ಚು ಜನರನ್ನು ರಕ್ಷಿಸಲು ಸೇನೆಯು ಕರೆ ನೀಡಿದೆ
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಭಾರಿ ಮಳೆಯ ನಡುವೆ ವಿವಿಧ ಗ್ರಾಮಗಳಲ್ಲಿ 200 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭಾರತೀಯ ಸೇನೆಯನ್ನು ನಿಯೋಜಿಸಿದ್ದಾರೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ನಾಂದೇಡ್ ಜಿಲ್ಲೆಗೆ ಹಳದಿ ಎಚ್ಚರಿಕೆಯನ್ನು ನೀಡಿದ್ದು, ಪಿಟಿಐ ಜೊತೆ ಮಾತನಾಡಿದ ನಾಂದೇಡ್ ಕಲೆಕ್ಟರ್ ರಾಹುಲ್ ಕಾರ್ಡಿಲೆ, ಪ್ರವಾಹದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಜಿಲ್ಲಾಡಳಿತ ಭಾರತೀಯ ಸೇನೆಯ ಘಟಕವನ್ನು ಕರೆದಿದೆ.
ನಾಂದೇಡ್‌ನ ಮುಖೇಡ್ ಪ್ರದೇಶದಲ್ಲಿ 15 ಸದಸ್ಯರ ಸೇನಾ ತಂಡವನ್ನು ನಿಯೋಜಿಸಲಾಗುವುದು. ಅಣೆಕಟ್ಟುಗಳಿಂದ ನೀರು ಬಿಡುಗಡೆಯೂ ನಡೆಯುತ್ತಿದೆ.ನೆರೆಯ ತೆಲಂಗಾಣ ರಾಜ್ಯದ ನೀರಾವರಿ ಇಲಾಖೆಯ ಕಾರ್ಯದರ್ಶಿಗೆ ಕರೆ ಮಾಡಿ, ಅಗತ್ಯವಿದ್ದರೆ ಅವರ ವ್ಯಾಪ್ತಿಯಲ್ಲಿ ಪೋಚಂಪಡ್ ಅಣೆಕಟ್ಟಿನಿಂದ ನೀರಿನ ಬಿಡುಗಡೆ ನಿರ್ವಹಿಸುವಂತೆ ಕೇಳಿಕೊಂಡಿದ್ದೇನೆ ಎಂದು ಅಧಿಕಾರಿಗಳು ತಿಳಿಸಿದರು.
ಭಾರೀ ಮಳೆಯ ನಡುವೆ ಮುಖೇಡ್ ತಾಲ್ಲೂಕಿನ ರಾವಂಗಾವ್ ಮತ್ತು ಹಸ್ನಾಲ್ ಗ್ರಾಮಗಳಲ್ಲಿ ಸಿಲುಕಿದ್ದ 21 ಜನರನ್ನು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ರಕ್ಷಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ರಾವಂಗಾವ್, ಹಸ್ನಾಲ್, ಭಾಸ್ವಾಡಿ ಮತ್ತು ಭಿಗೇಲಿ ಗ್ರಾಮಗಳಲ್ಲಿ 200 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.
ಅಣೆಕಟ್ಟುಗಳಿಂದ ನೀರನ್ನು ಹೊರಹಾಕಲಾಗುತ್ತಿದೆ, ಹಡ್ಗಾವ್, ಹಿಮಾಯತ್‌ನಗರ ಮತ್ತು ಕಿನ್ವಾಟ್‌ನಲ್ಲಿ ನಮಗೆ ತಂಡಗಳು ಬೇಕಾಗಬಹುದು. ಗೋದಾವರಿ ಜಲಾನಯನ ಪ್ರದೇಶದ ಹಳ್ಳಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.