ರಾಧಾಕೃಷ್ಣನ್ - ಪ್ರಧಾನಿ ಮೋದಿ 
ದೇಶ

ಪ್ರಧಾನಿ ಮೋದಿ ಭೇಟಿಯಾದ NDA ಉಪ ರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್

ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಎನ್‌ಡಿಎನ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದು, ಹಲವಾರು ನಾಯಕರನ್ನು ಭೇಟಿಯಾದರು.

ನವದೆಹಲಿ: ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ತಮ್ಮನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಒಂದು ದಿನದ ನಂತರ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಎನ್‌ಡಿಎನ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದು, ಹಲವಾರು ನಾಯಕರನ್ನು ಭೇಟಿಯಾದರು.

ಸಭೆಯ ನಂತರ, ಪ್ರಧಾನಿ ಮೋದಿ ತಮ್ಮ ಎಕ್ಸ್‌ನಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿಯ ಭೇಟಿಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. "ಸಿಪಿ. ರಾಧಾಕೃಷ್ಣನ್ ಜಿ ಅವರನ್ನು ಭೇಟಿಯಾದೆ. ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ನನ್ನ ಶುಭಾಶಯಗಳನ್ನು ತಿಳಿಸಿದೆ ಎಂದು ಹೇಳಿದ್ದಾರೆ.

ರಾಧಾಕೃಷ್ಣನ್ ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಬಹಳವಾಗಿ ಶ್ರೀಮಂತಗೊಳಿಸುತ್ತದೆ. ಅವರು ಸಮರ್ಪಣೆ ಮತ್ತು ದೃಢಸಂಕಲ್ಪದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ" ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

ರಾಧಾಕೃಷ್ಣನ್ ಅವರು ಆಗಸ್ಟ್ 20 ರಂದು ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಅಲ್ಲದೆ ಮಂಗಳವಾರ ನಡೆಯಲಿರುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅವರನ್ನು ಸನ್ಮಾನಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT