ತಿರುಪತಿ 
ದೇಶ

ಉದ್ಯಮಿಯಿಂದ ತಿರುಪತಿ ತಿಮ್ಮಪ್ಪನಿಗೆ 140 ಕೋಟಿ ರೂ ಮೌಲ್ಯದ 121 ಕೆಜಿ ಚಿನ್ನ ಕಾಣಿಕೆ!

ತಮ್ಮ ಉದ್ಯಮದ ಯಶಸ್ಸಿನ ಪ್ರತೀಕವಾಗಿ ತಿರುಪತಿ ವೆಂಕಟೇಶ್ವರ ಸ್ವಾಮಿಗೆ 121 ಕೆಜಿ ಬಂಗಾರವನ್ನು ಕಾಣಿಕೆಯಾಗಿ ನೀಡುವುದಾಗಿ ಅವರು ಹರಕೆ ಹೊತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಅಮರಾವತಿ: ಉದ್ಯಮಿಯೊಬ್ಬರು ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ 140 ಕೋಟಿ ರೂ. ಮೌಲ್ಯದ 121 ಕೆಜಿ ಚಿನ್ನ ಕಾಣಿಕೆ ನೀಡುತ್ತಿದ್ದಾರೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ತಿಳಿಸಿದ್ದಾರೆ.

ತಮ್ಮ ಉದ್ಯಮದ ಯಶಸ್ಸಿನ ಪ್ರತೀಕವಾಗಿ ತಿರುಪತಿ ವೆಂಕಟೇಶ್ವರ ಸ್ವಾಮಿಗೆ 121 ಕೆಜಿ ಬಂಗಾರವನ್ನು ಕಾಣಿಕೆಯಾಗಿ ನೀಡುವುದಾಗಿ ಅವರು ಹರಕೆ ಹೊತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

'ಬಡತನ ನಿರ್ಮೂಲನೆ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆಂಧ್ರ ಸಿಎಂ, ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿ ಸ್ಥಾಪಿಸಲು ಬಯಸಿದ್ದರು ಮತ್ತು ಅದರಂತೆ ಕಂಪನಿ ಸ್ಥಾಪಿಸಿ ತಿಮ್ಮಪ್ಪನ ಆರ್ಶೀವಾದದಿಂದ ಯಶಸ್ವಿಯಾದರು. ಈಗ ದೈವಾನುಗ್ರಹದಿಂದ ದೊರೆತ ಈ ಯಶಸ್ಸಿಗೆ ಕೃತಜ್ಞತೆ ಸಲ್ಲಿಸಲು ಅವರು ಮುಂದಾಗಿದ್ದಾರೆ. ಅದಕ್ಕಾಗಿ 121 ಕೆಜಿ ಬಂಗಾರವನ್ನು ಸ್ವಾಮಿಗೆ ಅರ್ಪಿಸುತ್ತಿದ್ದಾರೆ ಎಂದರು.

ತಮ್ಮ ಗುರುತನ್ನು ಬಹಿರಂಗಪಡಿಸಲು ಇಚ್ಛಿಸದ ಆ ಭಕ್ತ, ತಮ್ಮ ಕಂಪನಿಯ ಶೇ. 60 ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ 1.5 ಬಿಲಿಯನ್ ಯುಎಸ್ ಡಾಲರ್ ಅಥವಾ ಸುಮಾರು 6,000 ಕೋಟಿಯಿಂದ 7,000 ಕೋಟಿ ರೂ.ಗಳವರೆಗೆ ಗಳಿಸಿದ್ದಾರೆ.ತಮಗೆ ಈ ಸಂಪತ್ತನ್ನು ಶ್ರೀ ವೆಂಕಟೇಶ್ವರ ಸ್ವಾಮಿಯೇ ಕರುಣಿಸಿದ್ದಾರೆ ಎಂಬ ನಂಬಿಕೆಯಿಂದ ಅವರು ಇದೀಗ ಈ ಬೃಹತ್ ದೇಣಿಗೆಯನ್ನು ನೀಡಲು ನಿರ್ಧರಿಸಿದ್ದಾರೆ ಎಂಬುದಾಗಿ ಚಂದ್ರಬಾಬು ನಾಯ್ಡು ಮಾಹಿತಿ ನೀಡಿದರು.

ತಿರುಪತಿಯಲ್ಲಿ ಪ್ರತಿದಿನ ಶ್ರೀ ವೆಂಕಟೇಶ್ವರ ಸ್ವಾಮಿಯ ವಿಗ್ರಹವನ್ನು ಸುಮಾರು 120 ಕೆಜಿ ತೂಕದ ಚಿನ್ನದ ಆಭರಣಗಳಿಂದ ಅಲಂಕರಿಸಲಾಗುತ್ತದೆ. ಈ ವಿಷಯವನ್ನು ತಿಳಿದುಕೊಂಡ ಆ ಅನಾಮಧೇಯ ಭಕ್ತರು, ಅದಕ್ಕಿಂತ ಒಂದು ಕೆಜಿ ಹೆಚ್ಚಿಗೆ, ಅಂದರೆ 121 ಕೆಜಿ ಚಿನ್ನ ದಾನ ಮಾಡಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT