ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಶಂಕರ್  
ದೇಶ

New Delhi: ಚೀನಾ ವಿದೇಶಾಂಗ ಸಚಿವ ಭೇಟಿ ನಡುವೆ ಭಾರತಕ್ಕೆ ಪಾಕಿಸ್ತಾನ ಶಾಕ್! ಕಳವಳಕ್ಕೆ ಕಾರಣವಾಯ್ತು ವಾಂಗ್ ಯಿ ನಡೆ!

ಅನೇಕ ರಂಗಗಳಲ್ಲಿ ಉಭಯ ರಾಷ್ಟ್ರಗಳ ಪ್ರಯತ್ನಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಕೂಡಾ ಹೇಳಿದ್ದಾರೆ. ಆದಾಗ್ಯೂ, ಪಾಕಿಸ್ತಾನ ಮಂಗಳವಾರ ಭಾರತಕ್ಕೆ ದೊಡ್ಡ ಶಾಕ್ ನೀಡಿದೆ.

ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಡುವಿನ ಭೇಟಿ ವೇಳೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಮಾತುಕತೆ ಫಲ ಪ್ರದವಾಗಿದೆ ಎಂದು ಹೇಳಲಾಗುತ್ತಿದೆ.

ಅನೇಕ ರಂಗಗಳಲ್ಲಿ ಉಭಯ ರಾಷ್ಟ್ರಗಳ ಪ್ರಯತ್ನಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಕೂಡಾ ಹೇಳಿದ್ದಾರೆ. ಆದಾಗ್ಯೂ, ಪಾಕಿಸ್ತಾನ ಮಂಗಳವಾರ ಭಾರತಕ್ಕೆ ದೊಡ್ಡ ಶಾಕ್ ನೀಡಿದೆ.

ಚೀನಾ ವಿದೇಶಾಂಗ ಸಚಿವರು ದೋವಲ್, ಜೈಶಂಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ ಬೆನ್ನಲ್ಲೇ ಆಗಸ್ಟ್ 21 ರಂದು ಇಸ್ಲಾಮಾಬಾದ್ ಗೆ ತೆರಳುತ್ತಿದ್ದು, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದು ಭಾರತದ ಕಳವಳಕ್ಕೆ ಕಾರಣವಾಗಿದೆ.

ಈ ಸಂಬಂಧ ಮಂಗಳವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನ, ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ ಅವರ ಆಹ್ವಾನದ ಮೇರೆಗೆ 6ನೇ ಪಾಕಿಸ್ತಾನ-ಚೀನಾ ವಿದೇಶಾಂಗ ಸಚಿವರ ಕಾರ್ಯತಂತ್ರ ಮಾತುಕತೆಯಲ್ಲಿ ಪಾಲ್ಗೊಳ್ಳಲು ಚೀನಾ ವಿದೇಶಾಂಗ ಸಚಿವರು ಆಗಸ್ಟ್ 21 ರಂದು ಇಸ್ಲಾಮಾಬಾದ್ ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದೆ.

ಪಾಕಿಸ್ತಾನ ಮತ್ತು ಚೀನಾ ನಡುವಿನ ಕಾರ್ಯತಂತ್ರದ ಸಹಕಾರದ ಸಹಭಾಗಿತ್ವವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಆರ್ಥಿಕ-ವ್ಯಾಪಾರ ಕ್ಷೇತ್ರದಲ್ಲಿ ಬೆಂಬಲ ಹೆಚ್ಚಳ ಹಾಗೂ ಪ್ರಾದೇಶಿಕ ಶಾಂತಿ, ಅಭಿವೃದ್ಧಿ ಮತ್ತು ಸ್ಥಿರತೆಯಲ್ಲಿ ಉಭಯ ರಾಷ್ಟ್ರಗಳ ಬದ್ಧತೆಯ ಭಾಗವಾಗಿ ಚೀನಾ ವಿದೇಶಾಂಗ ಸಚಿವರು ಇಸ್ಲಾಮಾಬಾದ್ ಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಈ ಕಾರ್ಯತಂತ್ರದ ಮಾತುಕತೆಯು ಮತ್ತೊಮ್ಮೆ 'ಆಪರೇಷನ್ ಸಿಂಧೂರ' ದಲ್ಲಿ ಚೀನಾದ ಪಾತ್ರವನ್ನು ಗುರುತಿಸಿದೆ. ಇತ್ತೀಚೆಗಷ್ಟೇ ಸೇನಾಪಡೆಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಾಹುಲ್ ಆರ್ ಸಿಂಗ್ ಅವರು ಕಾರ್ಯಾಚರಣೆಯ ವೇಳೆ ಭಾರತೀಯ ಸೇನಾ ನೆಲೆಗಳ ಬಗ್ಗೆ ಚೀನಾ, ಪಾಕಿಸ್ತಾನಕ್ಕೆ ಗುಪ್ತಚರ ಮಾಹಿತಿ ನೀಡುತಿತ್ತು ಎಂದು ಆರೋಪಿಸಿದ್ದರು.

ಪಾಕಿಸ್ತಾನದ ಮಿಲಿಟರಿ ಉಪಕರಣಗಳಲ್ಲಿ ಶೇ. 81 ರಷ್ಟು ಚೀನಾ ದೇಶಕ್ಕೆ ಸೇರಿವೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆಯಡಿ ಪಾಕಿಸ್ತಾನದಲ್ಲಿ ಚೀನಾ ಗಮನಾರ್ಹ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿದೆ. ಅಲ್ಲದೇ ಪ್ರಮುಖ ಮಿತ್ರ ರಾಷ್ಟ್ರವಾದ ಪಾಕಿಸ್ತಾನಕ್ಕೆ ಶಸಾಸ್ತ್ರಗಳು, ಯುದ್ಧ ವಿಮಾನಗಳು, ವಾಯು ರಕ್ಷಣಾ ವ್ಯವಸ್ಥೆಗಳು ಮತ್ತಿತರ ಉಪಕರಣಗಳನ್ನು ಚೀನಾ ಪೂರೈಸಿದೆ.

ಹೀಗೆ ವಾಂಗ್ ಯಿ ನವದೆಹಲಿಯಲ್ಲಿ ವಾಂಗ್ ಯಿ ಭಾರತದ ಉನ್ನತ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವಂತೆಯೇ ಇಸ್ಲಾಮಾಬಾದ್ ನಲ್ಲಿ ಅವರಿಗೆ ಆತಿಥ್ಯ ನೀಡಲು ಪಾಕಿಸ್ತಾನ ಸಜ್ಜಾಗಿದೆ. ಇದು ಸಾಕಷ್ಟು ಅನುಮಾನ ಹಾಗೂ ಕಳವಳಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಬೇಡಿ: ಕುರುಬ ಸಮುದಾಯ ST ಸೇರ್ಪಡೆ ಪ್ರಸ್ತಾಪಕ್ಕೆ VS ಉಗ್ರಪ್ಪ ವಿರೋಧ

SCROLL FOR NEXT