ನವದೆಹಲಿ: ಮುಂದಿನ ತಿಂಗಳು ಸೆಪ್ಟೆಂಬರ್ 9ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ, ಅದಕ್ಕೆ ಈಗಾಗಲೇ ಎನ್ ಡಿಎ ಆಡಳಿತ ಪಕ್ಷ ಮೈತ್ರಿಕೂಟದ ಅಭ್ಯರ್ಥಿ ಘೋಷಣೆಯಾಗಿದೆ.
ವಿರೋಧ ಪಕ್ಷಗಳ ಇಂಡಿಯಾ ಬಣವು ಇಂದು ಮಧ್ಯಾಹ್ನ ತನ್ನ ಉಪ ರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಘೋಷಿಸಲು ಸಜ್ಜಾಗಿದೆ, ನಿನ್ನೆ ಉನ್ನತ ನಾಯಕರು ಆಯ್ಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು ಇಂದು ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.
ಸಂಸತ್ತಿನ ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆ ಇಂದು ಮಧ್ಯಾಹ್ನ 12:30 ಕ್ಕೆ ರಾಜಾಜಿ ಮಾರ್ಗದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸಭೆಯಲ್ಲಿ ಬಂದ ಹೆಸರುಗಳಲ್ಲಿ 'ಭಾರತದ ಚಂದ್ರ ಮನುಷ್ಯ' ಪದ್ಮಶ್ರೀ, ಇಸ್ರೊ ಮಾಜಿ ಅಧ್ಯಕ್ಷ ಡಾ. ಮೈಲ್ಸ್ವಾಮಿ ಅಣ್ಣಾದೊರೈ ಮತ್ತು ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರ ಹೆಸರುಗಳಿವೆ ಎಂದು ಮೂಲಗಳು ತಿಳಿಸಿವೆ. ವಿರೋಧ ಪಕ್ಷಗಳ ಅಭ್ಯರ್ಥಿಯು ಎನ್‌ಡಿಎ ಆಯ್ಕೆ ಮಾಡಿದ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರೊಂದಿಗೆ ಸ್ಪರ್ಧಿಸಲಿದ್ದಾರೆ.
ಡಿಎಂಕೆಯ ಹಿರಿಯ ನಾಯಕರು ತಮಿಳುನಾಡು ಮೂಲದ ಅಣ್ಣಾದೊರೈ ಅವರ ಹೆಸರನ್ನು ಉಪ ರಾಷ್ಟ್ರಪತಿ ಹುದ್ದೆಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿರಿಯ ಡಿಎಂಕೆ ನಾಯಕ ತಿರುಚಿ ಶಿವ ಅವರ ಹೆಸರು ಕೂಡ ಕೇಳಿಬರುತ್ತಿದೆ, ಆದರೆ ಇತರ ವಿರೋಧ ಪಕ್ಷದ ನಾಯಕರೊಂದಿಗೆ ಇನ್ನೂ ಚರ್ಚೆ ನಡೆದಿಲ್ಲ. ಆದಾಗ್ಯೂ, ಶಿವ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು,
ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಅವರು ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ತಮಿಳು ನಾಡು ಮೂಲದವರು.
ಅಣ್ಣಾದೊರೈ ಅವರು ಚಂದ್ರಯಾನ-1 ಮತ್ತು ಚಂದ್ರಯಾನ-2 ಕಾರ್ಯಕ್ರಮಗಳಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಅವರ ನಾಮನಿರ್ದೇಶನವು ವಿರೋಧ ಪಕ್ಷವು ಕೊಯಮತ್ತೂರಿನ ಮಾಜಿ ಸಂಸದರನ್ನು ತಮ್ಮ ಅಭ್ಯರ್ಥಿಯಾಗಿ ಬಿಂಬಿಸುವ ಮೂಲಕ NDA ದಕ್ಷಿಣ ಭಾರತ ರಾಜ್ಯಗಳ ಮೇಲೆ ಪ್ರಾಬಲ್ಯ ಸಾಧಿಸಲು ತೋರಿಸುತ್ತಿರುವ ಪೈಪೋಟಿಯನ್ನು ಎದುರಿಸಲಿದೆ. ವಿರೋಧ ಪಕ್ಷಗಳು, ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಸ್ಥಾನಕ್ಕೆ ರಾಷ್ಟ್ರೀಯ ನಿಲುವು ಮತ್ತು ಪ್ರತಿಷ್ಠೆಯನ್ನು ಹೊಂದಿರುವ ರಾಜಕೀಯೇತರ ವ್ಯಕ್ತಿಯನ್ನು ಕಣಕ್ಕಿಳಿಸಲು ಬಯಸುತ್ತದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಉಪ ರಾಷ್ಟ್ರಪತಿ ಚುನಾವಣೆಗೆ ರಾಜಕೀಯೇತರ ವ್ಯಕ್ತಿಯನ್ನು ಹೊಂದಲು ಪಕ್ಷವು ಉತ್ಸುಕವಾಗಿದೆ ಎಂದು ಟಿಎಂಸಿ ಹೇಳಿದೆ. ಕಳೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಟಿಎಂಸಿ, ಕಾಂಗ್ರೆಸ್ ಪಕ್ಷದ ನಾಯಕಿ ಮಾರ್ಗರೇಟ್ ಆಳ್ವಾ ಅವರನ್ನು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡುವಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದರಿಂದ ಮತದಾನದಿಂದ ದೂರವಿತ್ತು.
ಈಗಿನ ಬೆಳವಣಿಗೆಗಳ ಬಗ್ಗೆ ತಿಳಿದಿರುವವರ ಪ್ರಕಾರ, ಅಭ್ಯರ್ಥಿ ಬಿಹಾರ ಅಥವಾ ತಮಿಳುನಾಡು ಮೂಲದವರಾಗಿರಬೇಕು ಎಂಬ ಅಭಿಪ್ರಾಯ ವಿರೋಧ ಪಕ್ಷಗಳಲ್ಲಿ ಚಾಲ್ತಿಯಲ್ಲಿತ್ತು. ಆರ್‌ಎಸ್‌ಎಸ್ ಹಿನ್ನೆಲೆಯ ನಾಯಕ ರಾಧಾಕೃಷ್ಣನ್ ಅವರ ನಾಮ ನಿರ್ದೇಶನವು ವ್ಯಾಪಕ ವಿರೋಧ ಪಕ್ಷದಿಂದ, ವಿಶೇಷವಾಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯಿಂದ ಬೆಂಬಲವನ್ನು ಗಳಿಸುತ್ತದೆ ಎಂದು ಬಿಜೆಪಿ ನಂಬಿದ್ದರೂ, ವಿರೋಧ ಪಕ್ಷಗಳು ಯಾವ ನಿಲುವನ್ನು ತೆಗೆದುಕೊಳ್ಳುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡಿಎಂಕೆ ರಾಧಾಕೃಷ್ಣನ್ ಬೆಂಬಲಿಸುವುದಿಲ್ಲ
ಎನ್‌ಡಿಎಯ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸುವ ಉದ್ದೇಶ ಪಕ್ಷಕ್ಕೆ ಇಲ್ಲ ಎಂದು ಡಿಎಂಕೆ ನಾಯಕರು ಹೇಳಿದ್ದಾರೆ. "ನಾವು ಸಿದ್ಧಾಂತಕ್ಕೆ ಮಾತ್ರ ಆದ್ಯತೆ ನೀಡುತ್ತೇವೆ. ರಾಧಾಕೃಷ್ಣನ್ ತಮಿಳು ನಾಡಿನವರು ಎಂಬ ಕಾರಣಕ್ಕೆ ನಾವು ಅವರನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಎನ್‌ಡಿಎ ಅಭ್ಯರ್ಥಿಗೆ ಬೆಂಬಲ
ವೈಎಸ್ಆರ್ ಕಾಂಗ್ರೆಸ್ ಪಕ್ಷವು ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸಲು ಸಜ್ಜಾಗಿದೆ. ಆಡಳಿತ ಮೈತ್ರಿಕೂಟದ ಅಭ್ಯರ್ಥಿಗೆ ಪ್ರಾದೇಶಿಕ ಪಕ್ಷದ ಬೆಂಬಲವನ್ನು ಕೋರಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.