ಅಬ್ಬಾಸ್ ಅನ್ಸಾರಿ 
ದೇಶ

ದ್ವೇಷ ಭಾಷಣ: ಅಬ್ಬಾಸ್ ಅನ್ಸಾರಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್! ಮತ್ತೆ ಶಾಸಕ ಸ್ಥಾನ...

ಅನ್ಸಾರಿ ಅರ್ಜಿಯನ್ನು ಸ್ವೀಕರಿಸಿದ ಹೈಕೋರ್ಟ್, 2 ವರ್ಷ ಕಠಿಣ ಸೆರೆವಾಸ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಪ್ರಯಾಗರಾಜ್: ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಅವರ ಪುತ್ರ, ಮಾಜಿ ಶಾಸಕ ಅಬ್ಬಾಸ್ ಅನ್ಸಾರಿ ಅವರಿಗೆ ಅಲಹಾಬಾದ್ ಹೈಕೋರ್ಟ್‌ ನಿಂದ ಬುಧವಾರ ಬಿಗ್ ರಿಲೀಫ್ ಸಿಕ್ಕಿದೆ.

ಅನ್ಸಾರಿ ಅರ್ಜಿಯನ್ನು ಸ್ವೀಕರಿಸಿದ ಹೈಕೋರ್ಟ್, 2 ವರ್ಷ ಕಠಿಣ ಸೆರೆವಾಸ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು. ಇದರೊಂದಿಗೆ ಮತ್ತೆ ಅವರಿಗೆ ಶಾಸಕ ಸ್ಥಾನಮಾನ ಕಲ್ಪಿಸಲಾಯಿತು. ಅವರು ಪ್ರತಿನಿಧಿಸುವ ಮೌ ಸದರ್ ವಿಧಾನಸಭಾ ಸ್ಥಾನಕ್ಕೆ ಯಾವುದೇ ಉಪ ಚುನಾವಣೆ ಇರುವುದಿಲ್ಲ.

2022 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಡಿದ ದ್ವೇಷ ಭಾಷಣ ಹಿನ್ನೆಲೆಯಲ್ಲಿ ಮೌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 31, 2025 ರಂದು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ರೂ 3,000 ದಂಡವನ್ನು ವಿಧಿಸಿತು. ಆ ಅಪರಾಧದ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನವನ್ನು ಜೂನ್ 1, 2025 ರಂದು ಕೊನೆಗೊಳಿಸಲಾಗಿತ್ತು.

ಜುಲೈ 5 ರಂದು ಮೌ ಜಿಲ್ಲಾ ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದಾಗ ಅಬ್ಬಾಸ್ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ಹೈಕೋರ್ಟ್ ಜುಲೈ 30ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಈ ಪ್ರಕರಣದಲ್ಲಿ ಅಬ್ಬಾಸ್ ಅನ್ಸಾರಿ ಪರ ವಕೀಲ ಉಪೇಂದ್ರ ಉಪಾಧ್ಯಾಯ ಅವರು ವಾದ ಮಂಡಿಸಿದರೆ, ಅಡ್ವೊಕೇಟ್ ಜನರಲ್ ಅಜಯ್ ಕುಮಾರ್ ಮಿಶ್ರಾ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಂಸಿ ಚತುರ್ವೇದಿ ಅವರು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದರು.

ಇಂದಿನ ಹೈಕೋರ್ಟ್ ತೀರ್ಪಿನೊಂದಿಗೆ ಅಬ್ಬಾಸ್ ಅನ್ಸಾರಿ ಮತ್ತೆ ಶಾಸಕ ಸ್ಥಾನವನ್ನು ಪಡೆದರು. ಇದು ಮೌನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT