ನವದೆಹಲಿ: ಕೇಂದ್ರ ದೆಹಲಿಯ ದರಿಯಾಗಂಜ್‌ನ ಸದ್ಭಾವನಾ ಪಾರ್ಕ್ ಬಳಿ ಬುಧವಾರ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಇಂದು ಮಧ್ಯಾಹ್ನ 12.14 ಕ್ಕೆ ಮಾಹಿತಿ ಬಂದಿದ್ದು, ಮೂರು ಮಹಡಿಗಳ ಕಟ್ಟಡ ಕುಸಿದು ಬಿದ್ದಿದ್ದು, ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳನ್ನು ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ(ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವಶೇಷಗಳಿಂದ ಮೂವರನ್ನು ರಕ್ಷಿಸಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.