ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ, ಆಗಸ್ಟ್ 25, 2025 ರಂದು ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ನಂತರ ಸ್ಥಳದಲ್ಲಿ ವಾಹನದ ಅವಶೇಷಗಳು. Photo | PTI
ದೇಶ

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್-ಟ್ರ್ಯಾಕ್ಟರ್ ನಡುವೆ ಡಿಕ್ಕಿ; 9 ಮಂದಿ ದುರ್ಮರಣ, 42 ಜನರಿಗೆ ಗಾಯ; Video

ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಇಂದು ಬೆಳಗಿನ ಜಾವ 2.10 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬುಲಂದ್‌ಶಹರ್: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿ, 42 ಜನ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಇಂದು ಬೆಳಗಿನ ಜಾವ 2.10 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.

ಟ್ರ್ಯಾಕ್ಟರ್ ಟ್ರಾಲಿ ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗಾಗಿ 61 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು.

ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್‌ಎಸ್‌ಪಿ ಸೇರಿದಂತೆ ಪೊಲೀಸ್ ತಂಡಗಳು ಅಪಘಾತ ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್