ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಬಂಧನ  
ದೇಶ

ದೆಹಲಿ ಸಿಎಂ ಮೇಲೆ ಹಲ್ಲೆ: ಇಬ್ಬರ ವಿರುದ್ಧ ಕ್ರಿಮಿನಲ್ ಪಿತೂರಿ ಕೇಸ್ ದಾಖಲು

ಈ ಹಲ್ಲೆ ಒಂದು ಪ್ರತ್ಯೇಕ ಕೃತ್ಯವಲ್ಲ, ಬದಲಾಗಿ ಯೋಜಿತ ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಪುರಾವೆಗಳನ್ನು ಕಂಡುಕೊಂಡ ನಂತರ ಹೊಸ ಆರೋಪವನ್ನು ಸೇರಿಸಲಾಗಿದೆ.

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲಿನ ಇತ್ತೀಚಿನ ದಾಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ಇಬ್ಬರೂ ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಕೇಸ್ ದಾಖಲಿಸಿದ್ದಾರೆ.

ತನಿಖಾಧಿಕಾರಿಗಳು, ಈ ಹಲ್ಲೆ ಒಂದು ಪ್ರತ್ಯೇಕ ಕೃತ್ಯವಲ್ಲ, ಬದಲಾಗಿ ಯೋಜಿತ ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಪುರಾವೆಗಳನ್ನು ಕಂಡುಕೊಂಡ ನಂತರ ಹೊಸ ಆರೋಪವನ್ನು ಸೇರಿಸಲಾಗಿದೆ ಎಂದು ದೆಹಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಗಾಗಲೇ ಬಂಧನದಲ್ಲಿರುವ ಆರೋಪಿಗಳಾದ ರಾಜೇಶ್‌ಭಾಯ್ ಖಿಮ್ಜಿ ಮತ್ತು ತಹ್ಸೀನ್ ಸೈಯದ್ ಇಬ್ಬರ ವಿರುದ್ಧವೂ ಹಲ್ಲೆ ಮತ್ತು ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೀಗ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 61 ರ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಆರೋಪವನ್ನೂ ಸೇರಿಸಲಾಗಿದೆ.

"ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ" ಎಂದು ಅಧಿಕಾರಿ ಹೇಳಿದ್ದಾರೆ.

ಆಗಸ್ಟ್ 20 ರಂದು ಬೆಳಗ್ಗೆ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ದೆಹಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ 'ಜನ ಸಂವಾದ' ಕಾರ್ಯಕ್ರಮದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ, ರೇಖಾ ಗುಪ್ತಾ ಅವರ ಹಲ್ಲೆ ನಡೆಸಿದ್ದರು. ಈ ಹಲ್ಲೆಯನ್ನು "ರೇಖಾ ಅವರನ್ನು ಕೊಲ್ಲಲು ಯೋಜಿತ ಪಿತೂರಿ"ಯ ಭಾಗ ಎಂದು ಅವರ ಕಚೇರಿ ಹೇಳಿದೆ. ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ರಾಜ್‌ಕೋಟ್‌ ನಿವಾಸಿ ಸಕರಿಯಾ ರಾಜೇಶ್‌ಭಾಯಿ ಖಿಮ್ಜಿಭಾಯಿ(41) ಎಂಬಾತನನ್ನು ಬಂಧಿಸಿ, ಎಫ್ಐಆರ್‌ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್