ಪ್ರಧಾನಿ ಮೋದಿ 
ದೇಶ

ಪ್ರಧಾನಿ ಮೋದಿ ಪದವೀಧರರೇ? CIC ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಿಐಸಿ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ(ಡಿಯು) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ಫೆಬ್ರವರಿ 27 ರಂದು ತೀರ್ಪನ್ನು ಕಾಯ್ದಿರಿಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ಕುರಿತು ಮಾಹಿತಿ ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಸಿಐಸಿ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ(ಡಿಯು) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ಫೆಬ್ರವರಿ 27 ರಂದು ತೀರ್ಪನ್ನು ಕಾಯ್ದಿರಿಸಿದರು.

ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ಸಿಐಸಿಯ ಆಕ್ಷೇಪಾರ್ಹ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಮುಕ್ತ ನ್ಯಾಯಾಲಯದಲ್ಲಿ ಹೇಳಿದರು.

ಪ್ರಧಾನಿ ಮೋದಿ ಅವರ ಶೈಕ್ಷಣಿಕ ದಾಖಲೆ ಮತ್ತು ಪದವಿ ಬಗ್ಗೆ ಮಾಹಿತಿ ಬಹಿರಂಗಪಡಿಸುವ ಅಗತ್ಯ ಇಲ್ಲ. ಆದರೆ ಈ ವಿಷಯದ ಬಗ್ಗೆ ಎರಡೂ ಕಡೆಯವರು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಕೋರಿ ನೀರಜ್ ಎಂಬವರು ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು. 1978 ರಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡುವಂತೆ ಸಿಐಸಿ, ಡಿಸೆಂಬರ್ 21, 2016 ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವಿವಿ ಹೈಕೋರ್ಟ್ ಮೆಟ್ಟಿಲೇರಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT