ಸೇನಾ ಅಧಿಕಾರಿಯಿಂದ ಹಲ್ಲೆಗೊಳದ ವಿಮಾನದ ಸಿಬ್ಬಂದಿ 
ದೇಶ

ವಿಮಾನ ಸಿಬ್ಬಂದಿಯ ಮೇಲೆ ಹಲ್ಲೆ: ಸೇನಾ ಅಧಿಕಾರಿ ತಪ್ಪಿತಸ್ಥ; 5 ವರ್ಷ ವಿಮಾನ ಹತ್ತದಂತೆ ಬ್ಯಾನ್ ಮಾಡಿದ SpiceJet!

ಇದೇ ವರ್ಷದ ಜುಲೈ 26 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.

ನವದೆಹಲಿ: ಸ್ಪೈಸ್ ಜೆಟ್ (SpiceJet)ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಯನ್ನು 5 ವರ್ಷಗಳ ಕಾಲ ವಿಮಾನ ಹಾರಾಟ ನಿಷೇಧ ಪಟ್ಟಿಯಲ್ಲಿ ಇರಿಸಲಾಗಿದೆ.

ಇದೇ ವರ್ಷದ ಜುಲೈ 26 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.

ಈ ಸಂಬಂಧ ತನಿಖೆ ನಡೆಸಿದ ಆಂತರಿಕ ಸಮಿತಿಯು ನಾಲ್ವರು ಸ್ಪೈಸ್ ಜೆಟ್ ಉದ್ಯೋಗಿಗಳ ಮೇಲೆ ಹಿರಿಯ ಸೇನಾ ಅಧಿಕಾರಿಯೊಬ್ಬರು "ಘೋರವಾಗಿ ಹಲ್ಲೆ" ನಡೆಸಿದ್ದು, ಅವರು ತಪ್ಪಿತಸ್ಥರೆಂದು ಘೋಷಿಸಿದ್ದಾರೆ.

ಸ್ಪೈಸ್‌ಜೆಟ್ ಅಧಿಕಾರಿ ರಿತೇಶ್ ಕುಮಾರ್ ಸಿಂಗ್ ಅವರನ್ನು ಕನಿಷ್ಠ ಐದು ವರ್ಷಗಳ ಕಾಲ ವಿಮಾನಯಾನ ಸಂಸ್ಥೆಯ ನಿಷೇಧಿತರ ಪಟ್ಟಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ನಿಷೇಧಿತ ವ್ಯಕ್ತಿ 5 ವರ್ಷಗಳ ಸ್ಪೈಸ್ ಜೆಟ್ ನ ಯಾವುದೇ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ.

ಸಮಿತಿಯು ತನ್ನ ವರದಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (DGCA) ಸಲ್ಲಿಸಿದ್ದು, ಇತರ ವಿಮಾನಯಾನ ಸಂಸ್ಥೆಗಳೊಂದಿಗೆ ಹಂಚಿಕೊಂಡಿದೆ. ಆದರೆ, ಅವುಗಳು ಕೂಡಾ ಇದೇ ರೀತಿಯ ನಿಷೇಧ ಹೇರುತ್ತವೆಯೇ ಅಥವಾ ಇಲ್ಲವೇ ಎಂಬುದು ಆ ಸಂಸ್ಥೆಗಳ ನಿರ್ಧಾರಕ್ಕೆ ಬಿಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video