ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯ್ ಪಾಂಚೋಲಿ ಮತ್ತು ನ್ಯಾಯಮೂರ್ತಿ ಬಿ. ವಿ. ನಾಗರತ್ನ  
ದೇಶ

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ.ವಿ ನಾಗರತ್ನ ತೀವ್ರ ಅಸಮಾಧಾನ!

ಐವರು ಸದಸ್ಯರನ್ನೊಳಗೊಂಡ ಕೊಲಿಜಿಯಂ, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಪಾಂಚೋಲಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.

ನವದೆಹಲಿ: ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಿಸುವ ಕೊಲಿಜಿಯಂ ಶಿಫಾರಸಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ. ವಿ. ನಾಗರತ್ನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 25 ರಂದು ಸಭೆ ನಡೆಸಿದ ಸಿಜೆಐ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ ಕೆ ಮಹೇಶ್ವರಿ ಮತ್ತು ನಾಗರತ್ನ ಅವರನ್ನೊಳಗೊಂಡ ಐವರು ಸದಸ್ಯರನ್ನೊಳಗೊಂಡ ಕೊಲಿಜಿಯಂ, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಪಾಂಚೋಲಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.

ಅಕ್ಟೋಬರ್ 2031 ರಲ್ಲಿ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ನಿವೃತ್ತರಾಗಲಿದ್ದಾರೆ. ತದನಂತರ ನ್ಯಾಯಮೂರ್ತಿ ಪಾಂಚೋಲಿ ಅವರು ಮುಖ್ಯ ನ್ಯಾಯಮೂರ್ತಿ ಸ್ಥಾನದ ರೇಸ್ ನಲ್ಲಿರುತ್ತಾರೆ. ವಿವಿಧ ಕಾರಣಗಳಿಂದ ಪಾಂಚೋಲಿ ಅವರ ಹೆಸರನ್ನು ಶಿಫಾರಸು ಮಾಡುವ ಕ್ರಮಕ್ಕೆ ನಾಗರತ್ನ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವರು ಸುಪ್ರೀಂಕೋರ್ಟ್ ನಲ್ಲಿರುವ ಏಕೈಕ ಮಹಿಳಾ ನ್ಯಾಯಾಧೀಶರಾಗಿದ್ದಾರೆ. ಕಡಿಮೆ ಸೇವಾ ಹಿರಿತನ ಮತ್ತು ಗುಜರಾತ್ ಹೈಕೋರ್ಟ್ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆ ಸುತ್ತಲಿನ ಕಥೆಗಳ ಹೊರತಾಗಿಯೂ ಅವರನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಿರುವುದನ್ನು ನಾಗರತ್ನ ಅವರು ಒತ್ತಿ ಹೇಳಿದ್ದಾರೆ.

ಪಾಂಚೋಲಿ ಅವರು 2023ರ ಜುಲೈನಲ್ಲಿ ಗುಜರಾತ್ ಹೈಕೋರ್ಟ್ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆಯ ಕಾರಣದಿಂದ ನಾಗರತ್ನ ಅವರು ಆಕ್ಷೇಪ ಎತ್ತಿರಬಹುದು ಎಂದು ಮೂಲಗಳು ಹೇಳುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT