ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ಬುಡಕಟ್ಟು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಬಾಯ್​ಫ್ರೆಂಡ್ ಮೇಲೆ ಹಲ್ಲೆ

ಸೋಮವಾರ ಕಾಥಿಕುಂಡ್ ಪೊಲೀಸ್ ಠಾಣೆ ಪ್ರದೇಶದ ಗುಮ್ರಾ ಕಾಡಿನಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ದುಮ್ಕಾ: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ 17 ವರ್ಷದ ಬುಡಕಟ್ಟು ಬಾಲಕಿ ಮೇಲೆ ನಾಲ್ಕರಿಂದ ಐದು ಜನ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಮತ್ತು ಆಕೆಯ ಬಾಯ್​ಫ್ರೆಂಡ್ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಕಾಥಿಕುಂಡ್ ಪೊಲೀಸ್ ಠಾಣೆ ಪ್ರದೇಶದ ಗುಮ್ರಾ ಕಾಡಿನಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

"ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪಿಗೆ(ಪಿವಿಟಿಜಿ) ಸೇರಿದ ಈ ಹುಡುಗಿ, ತಾನು ಸಂಬಂಧ ಹೊಂದಿದ್ದ ವಾಹನದ ಕ್ಲೀನರ್ ಜೊತೆಗೆ ಕಲ್ಲಿದ್ದಲು ತುಂಬಿದ ಟ್ರಕ್‌ನಲ್ಲಿ ಬಂದಿದ್ದಳು" ಎಂದು ಕಾಥಿಕುಂಡ್ ಪೊಲೀಸ್ ಠಾಣೆಯ ಅಧಿಕಾರಿ ತ್ರಿಪುರಾರಿ ಕುಮಾರ್ ಅವರು ತಿಳಿಸಿದ್ದಾರೆ.

"ದುಮ್ಕಾದಲ್ಲಿ ಕಲ್ಲಿದ್ದಲು ಇಳಿಸಿ ಹಿಂತಿರುಗಲು ಚಾಲಕನಿಗೆ ಸೂಚಿಸಲಾಗಿತ್ತು. ಈ ವೇಳೆ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ನಾಲ್ಕೈದು ಯುವಕರು ಅವರನ್ನು ಅಡ್ಡಗಟ್ಟಿದರು" ಎಂದು ಅವರು ಹೇಳಿದ್ದಾರೆ.

ಈ ಯುವಕರು ಬಾಲಕಿಯ ಗೆಳೆಯನನ್ನು ಥಳಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

"ಇಂದು ಬೆಳಗ್ಗೆ, ಹುಡುಗಿ ತನ್ನ ಗೆಳೆಯನೊಂದಿಗೆ ಪೊಲೀಸ್ ಠಾಣೆಗೆ ಬಂದು ಘಟನೆಯನ್ನು ವಿವರಿಸಿದ್ದು, ಆಕೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ" ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್