ನಟ-ರಾಜಕಾರಣಿ ವಿಜಯ್ ಸುತ್ತ ನೆರೆದಿರುವ ಬೌನ್ಸರ್ ಗಳು 
ದೇಶ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು; ವಿಡಿಯೋದಲ್ಲಿ ಏನಿದೆ?

ನಟನನ್ನು ಹತ್ತಿರದಿಂದ ನೋಡಲು ಪ್ರಯತ್ನಿಸಿದಾಗ ವಿಜಯ್ ಬೌನ್ಸರ್‌ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರ ಶರತ್ ಕುಮಾರ್ ಆರೋಪಿಸಿದ್ದಾರೆ.

ಮಧುರೈ: ತಮಿಳುನಾಡಿನ ಮಧುರೈನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬೌನ್ಸರ್ ಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಟನನ್ನು ಹತ್ತಿರದಿಂದ ನೋಡಲು ಪ್ರಯತ್ನಿಸಿದಾಗ ವಿಜಯ್ ಬೌನ್ಸರ್‌ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರ ಶರತ್ ಕುಮಾರ್ ಆರೋಪಿಸಿದ್ದಾರೆ. 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನ ಮಧುರೈನಲ್ಲಿ ವಿಜಯ್ ಅವರ ರಾಜಕೀಯ ರ‍್ಯಾಲಿಯಲ್ಲಿ ಈ ಘಟನೆ ನಡೆದಿದೆ.

ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ಆಗಸ್ಟ್ 21 ರ ರ‍್ಯಾಲಿಯ ವೀಡಿಯೊದಲ್ಲಿ, ಟಿವಿಕೆ ಮುಖ್ಯಸ್ಥ ವಿಜಯ್ ರ‍್ಯಾಂಪ್ ವಾಕ್ ಮಾಡುವುದನ್ನು ಕಾಣಬಹುದು, ಆದರೆ ಬದಿಗಳಲ್ಲಿ ನೆರೆದಿದ್ದ ಲಕ್ಷಾಂತರ ಜನರು ವಿಜಯ್ ಅವರತ್ತ ಕೈ ಬೀಸಿ, ಘೋಷಣೆ ಕೂಗಿ ಹುರಿದುಂಬಿಸುತ್ತಾರೆ.

ಏಳು ನಿಮಿಷಗಳ ಅವಧಿಯ ವೀಡಿಯೊದ ಪ್ರಾರಂಭದಲ್ಲಿ, ಕನಿಷ್ಠ ಏಳು ಅಡಿ ಎತ್ತರದ ರ‍್ಯಾಂಪ್ ನಿಂದ ಒಬ್ಬ ವ್ಯಕ್ತಿಯನ್ನು ಎಸೆಯುವುದನ್ನು ಕಾಣಬಹುದು. ವಿಜಯ್ ನಡೆಯುತ್ತಿದ್ದಂತೆ ಅವರಿಗೆ ಶಾಲು ನೀಡಲು ಹಲವಾರು ಅಭಿಮಾನಿಗಳು ನುಗ್ಗುತ್ತಾರೆ. ಇದೇ ರೀತಿ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಬೌನ್ಸರ್‌ಗಳು ಹಿಡಿದು ಎಸೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಸಂಬಂಧ ಅವರು ಮಂಗಳವಾರ ಪೆರಂಬಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯ್ ಮತ್ತು ಅವರ ಬೌನ್ಸರ್‌ಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 189 (2), 296 (ಬಿ) ಮತ್ತು 115 (ಐ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದು ಕಾನೂನುಬಾಹಿರವಾಗಿ ಸೇರುವುದು ಮತ್ತು ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಅಪರಾಧಕ್ಕೆ ಕುಮ್ಮಕ್ಕು ನೀಡುವುದನ್ನು ಒಳಗೊಂಡಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT