ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ 
ದೇಶ

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಮೇಶ್ ನೇತೃತ್ವದ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.

ಗಡ್ಚಿರೋಲಿ: ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಛತ್ತೀಸ್‌ಗಢದ ಗಡ್ಚಿರೋಲಿ ಮತ್ತು ನಾರಾಯಣಪುರ ಜಿಲ್ಲೆಯ ಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಪರ್ಶಿ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ಆಗಸ್ಟ್ 25 ರಂದು ಪೊಲೀಸರಿಗೆ ವಿಶ್ವಾಸಾರ್ಹ ಮಾಹಿತಿ ದೊರೆತ ನಂತರ ನಕ್ಸಲ್ ವಿರೋಧಿ ಕಮಾಂಡೋ ಪಡೆ ಮತ್ತು ಸಿಆರ್‌ಪಿಎಫ್‌ನ ಕ್ಷೀಪ್ರ ಕಾರ್ಯಪಡೆಯ ಎರಡು ತುಕಡಿಗಳನ್ನು ಪ್ರದೇಶಕ್ಕೆ ಅಲ್ಲಿಗೆ ಕಳುಹಿಸಲಾಗಿತ್ತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಮೇಶ್ ನೇತೃತ್ವದ ತಂಡ ಇಂದು ಬೆಳಗ್ಗೆ ಅರಣ್ಯ ಪ್ರದೇಶ ತಲುಪಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.

ಸುಮಾರು ಎಂಟು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಮೂವರು ಮಹಿಳೆಯರು ಮತ್ತು ಒಬ್ಬ ಪುರುಷನ ಮೃತದೇಹಗಳನ್ನು ಮತ್ತು ಒಂದು ಎಸ್‌ಎಲ್‌ಆರ್ ರೈಫಲ್, ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು ಮತ್ತು ಒಂದು 303 ರೈಫಲ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಳಿದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!