ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ದೇಶ

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ.

ನವದೆಹಲಿ: ಇಂದೇ ಲೋಕಸಭಾ ಚುನಾವಣೆ ನಡೆದರೆ ಎನ್ ಡಿಎ ಮೈತ್ರಿಕೂಟ ಎಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದರ ಬಗ್ಗೆ ಇಂಡಿಯಾ ಟುಡೇ-ಸಿ ವೋಟರ್, ಮೂಡ್ ಆಫ್ ದಿ ನೇಷನ್ ಸಮೀಕ್ಷೆ ನಡೆಸಿವೆ.

ಈ ಸಮೀಕ್ಷೆ ಪ್ರಕಾರ, ಮೂರು ಪ್ರಮುಖ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವಿನ ಮೂಲಕ ಎನ್ ಡಿಎ ಮೈತ್ರಿಕೂಟ ಚೇತರಿಸಿಕೊಂಡಿದ್ದು, ಇಂದೇ ಲೋಕಸಭಾ ಚುನಾವಣೆ ನಡೆದರೆ ಎನ್ ಡಿಎ ಮೈತ್ರಿಕೂಟ 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.

ಮತ್ತೊಂದೆಡೆ 2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ.

ಈ ಸಮೀಕ್ಷೆಯನ್ನು 2025 ರ ಜುಲೈ 1 ರಿಂದ ಆಗಸ್ಟ್ 14ರ ನಡುವೆ ನಡೆಸಲಾಗಿದೆ. ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ 54,788 ವ್ಯಕ್ತಿಗಳನ್ನು ಸಮೀಕ್ಷೆ ಮಾಡಲಾಗಿದೆ. ಸಿ-ವೋಟರ್‌ನ ನಿಯಮಿತ ಟ್ರ್ಯಾಕರ್ ಡೇಟಾದಿಂದ ಹೆಚ್ಚುವರಿಯಾಗಿ 1,52,038 ಜನರ ಅಭಿಪ್ರಾಯಗಳನ್ನು ಸಹ ವಿಶ್ಲೇಷಿಸಲಾಗಿದೆ. ಹೀಗೆ ಈ ಸಮೀಕ್ಷೆಗಾಗಿ ಒಟ್ಟು 2,06,826 ಜನರ ಅಭಿಪ್ರಾಯವನ್ನು ಪರಿಗಣಿಸಲಾಗಿದೆ.

2024 ರ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳ ಪೈಕಿ 240 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಸ್ವಂತವಾಗಿ ಸರ್ಕಾರ ರಚಿಸಲು ಸರಳ ಬಹುಮತಕ್ಕೆ ಅಗತ್ಯವಿರುವ 272 ಸ್ಥಾನಗಳಿಗೆ 32 ಸ್ಥಾನಗಳ ಕೊರತೆಯಾಗಿತ್ತು. ತೆಲುಗು ದೇಶಂ ಹಾಗೂ ಜೆಡಿಯು ಮತ್ತಿತರ ಪಾಲುದಾರರೊಂದಿಗೆ, ಒಟ್ಟಾರೆ 293 ಸ್ಥಾನಗಳೊಂದಿಗೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸರ್ಕಾರ ರಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

ಹೊಸ ವರ್ಷದಲ್ಲಿ ಶುಭಸುದ್ದಿ? ನಾಯಕತ್ವ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

'ಬಾಂಗ್ಲಾದೇಶ ಮೂಲದ ಸಂಘಟನೆಯೊಂದಿಗೆ' ನಂಟು: ಅಸ್ಸಾಂ, ತ್ರಿಪುರಾದಲ್ಲಿ 11 ಜನರ ಬಂಧನ

SCROLL FOR NEXT