ಸಾಂದರ್ಭಿಕ ಚಿತ್ರ  
ದೇಶ

ಜಮ್ಮು-ಕಾಶ್ಮೀರ: ಬಂಡಿಪೋರಾದಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ; Video

ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರಗಾಮಿಗಳ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಇಬ್ಬರನ್ನು ಇಂದು ನಸುಕಿನ ಜಾವ ಹತ್ಯೆ ಮಾಡಿವೆ.

ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು -ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ X ನಲ್ಲಿ ತಿಳಿಸಿದೆ.

ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು ಒಳನುಸುಳುವವರನ್ನು ಗಮನಿಸಿದಾಗ ಅವರು ಮನಬಂದಂತೆ ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯೆ ನೀಡಲಾರಂಭಿಸಿದರು. ಭದ್ರತಾ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿ, ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದವು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ