ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಪೊಲೀಸ್ ಮಾಹಿತಿದಾರನೆಂದು ಶಂಕಿಸಿ ನಕ್ಸಲರಿಂದ ಶಿಕ್ಷಕನ ಹತ್ಯೆ

ನಕ್ಸಲರು ಶಿಕ್ಷಕನನ್ನು ಹರಿತವಾದ ಆಯುಧಗಳಿಂದ ಕೊಂದು ಗ್ರಾಮದ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 'ಶಿಕ್ಷಾದೂತ'(ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವ ತಾತ್ಕಾಲಿಕ ಶಿಕ್ಷಕ) ಆಗಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸ್ ಮಾಹಿತಿದಾರನೆಂದು ಶಂಕಿಸಿ, ನಕ್ಸಲರು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಟೋಡ್ಕಾ ಗ್ರಾಮದ ನಿವಾಸಿ ಕಲ್ಲು ತಾಟಿ ಎಂಬ ಶಿಕ್ಷಕ, ಶುಕ್ರವಾರ ಸಂಜೆ ಹತ್ತಿರದ ಲೆಂದ್ರ ಗ್ರಾಮದ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ನಕ್ಸಲರು ಅವರನ್ನು ಅಪಹರಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಕ್ಸಲರು ಶಿಕ್ಷಕನನ್ನು ಹರಿತವಾದ ಆಯುಧಗಳಿಂದ ಕೊಂದು ಗ್ರಾಮದ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಭದ್ರತಾ ಪಡೆಗಳ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಸ್ತಾರ್ ಪ್ರದೇಶದಲ್ಲಿ ಶಿಕ್ಷಾದೂತರನ್ನು ಗುರಿಯಾಗಿಸಿಕೊಂಡು ನಕ್ಸಲರು ದಾಳಿ ನಡೆಸುತ್ತಿದ್ದಾರೆ. ಅವರು ಪೊಲೀಸ್ ಮಾಹಿತಿದಾರರು ಎಂದು ಶಂಕಿಸಲಾಗಿದೆ ಮತ್ತು ಜೂನ್ 2023 ರಿಂದ ಬುಡಕಟ್ಟು ಪ್ರಾಬಲ್ಯದ ಬಸ್ತಾರ್ ಪ್ರದೇಶದಲ್ಲಿ ನಡೆದ ಎಂಟನೇ ಕೊಲೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಈ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಯುವ ಶಿಕ್ಷಕರ ಹತ್ಯೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಸಮಾಜವನ್ನು ಉನ್ನತೀಕರಿಸಲು ಕೆಲಸ ಮಾಡುವವರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ನಡೆಸುತ್ತಿರುವ ಇಂತಹ ಹೇಯ ಕೃತ್ಯಗಳನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ" ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರ್ದೇಶಕ ಸುಂದರರಾಜ್ ಪಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!

ರಷ್ಯನ್ ತೈಲ: ಆರ್ಥಿಕ ಅವಶ್ಯಕತೆ ಮತ್ತು ಅಮೆರಿಕದ ಒತ್ತಡಗಳ ನಡುವೆ ಸಿಲುಕಿದ ಭಾರತ, ಚೀನಾ (ಜಾಗತಿಕ ಜಗಲಿ)

ನಾವು ಭಾರತೀಯರನ್ನು ನಂಬುತ್ತೇವೆ; ಟ್ರಂಪ್ ನಮಗೆ...: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಾ ಕೊರಿನಾ ಮಚಾದೊ ಅಚ್ಚರಿ ಹೇಳಿಕೆ

ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ': ಮಿತಿ ಮೀರಿದ ವಾಕ್ಸಮರ, Video

SCROLL FOR NEXT