ಪ್ರಾತಿನಿಧಿಕ ಚಿತ್ರ 
ದೇಶ

ಲಖನೌ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು, ಕೆಲವರಿಗೆ ಗಾಯ

ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಕನಿಷ್ಠ ಇಬ್ಬರು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಲಖನೌ: ಗುಡಂಬಾ ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಕೆಲವರು ಗಾಯಗೊಂಡಿದ್ದಾರೆ' ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅನಿಂದ್ಯ ವಿಕರಂ ಸಿಂಗ್ ಹೇಳಿದ್ದಾರೆ.

ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಕನಿಷ್ಠ ಇಬ್ಬರು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

'ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ' ಎಂದು ಅಧಿಕಾರಿ ಹೇಳಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ತಕ್ಷಣವೇ ಸ್ಥಳಕ್ಕೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Big step or big threat? ರಷ್ಯಾದಿಂದ ತೈಲ ಖರೀದಿ, ಭಾರತಕ್ಕೆ ಮತ್ತೆ ಭಾರಿ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್!

ಹಾಂಕಾಂಗ್: ರನ್​ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ, ಇಬ್ಬರು ಸಾವು

ಅಕ್ಟೋಬರ್ 31ರವರೆಗೆ 'ಜಾತಿ ಗಣತಿ' ಸಮೀಕ್ಷೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬಣಕ್ಕೆ ಸ್ಪಷ್ಟ ಮುನ್ನಡೆ!

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

SCROLL FOR NEXT