ಕ್ಸಿ ಜಿನ್‌ಪಿಂಗ್ ಜತೆ ಪ್ರಧಾನಿ ಮೋದಿ ಮಾತುಕತೆ 
ದೇಶ

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಗಡಿಯಾಚೆಗಿನ ಭಯೋತ್ಪಾದನೆಯು ಭಾರತ ಮತ್ತು ಚೀನಾ ಎರಡರ ಮೇಲೂ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಸ್ತಾಪಿಸಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಭಾನುವಾರ ತಿಳಿಸಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದನೆಯು ಭಾರತ ಮತ್ತು ಚೀನಾ ಎರಡರ ಮೇಲೂ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು ಮತ್ತು ಈ ಸಮಸ್ಯೆಯನ್ನು ಎದುರಿಸುವಲ್ಲಿ ಎರಡೂ ದೇಶಗಳು ಪರಸ್ಪರ ಬೆಂಬಲಿಸುವುದು ಮುಖ್ಯ ಎಂದು ಮಿಶ್ರಿ ಅವರು ವಿಶೇಷ ಸುದ್ದಿಗೋಷ್ಠಿಯಲ್ಲಿ ಹೇಳಿದರು.

“ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಧಾನಿ ಮೋದಿ ಆದ್ಯತೆಯಾಗಿ ಉಲ್ಲೇಖಿಸಿದ್ದಾರೆ. ಇದು ಭಾರತ ಮತ್ತು ಚೀನಾ ಎರಡರ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ, ನಾವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುವಾಗ ಪರಸ್ಪರ ತಿಳುವಳಿಕೆ ಮತ್ತು ಬೆಂಬಲ ನೀಡುವುದು ಮುಖ್ಯ ಎಂದು ಪ್ರಧಾನಿ ಒತ್ತಿ ಹೇಳಿದರು” ಎಂದು ಮಿಶ್ರಿ ತಿಳಿಸಿದ್ದಾರೆ.

ಗಡಿಯಲ್ಲಿ ಶಾಂತಿ, ಸ್ಥಿರತೆ ಅಗತ್ಯ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಬಳಿಕ ಪರಸ್ಪರ ಅಭಿವೃದ್ಧಿ, ವ್ಯಾಪಾರ ಸಮತೋಲನ, ಭಯೋತ್ಪಾದನೆ ವಿರುದ್ಧದ ಹೋರಾಟ ಹಾಗೂ ಜನರಿಂದ ಜನರ ಸಂಪರ್ಕ ಹೆಚ್ಚಿಸುವ ವಿಷಯಗಳ ಬಗ್ಗೆ ಒಟ್ಟಾಗಿ ಸಾಗುವ ಕುರಿತು ಚರ್ಚೆ ನಡೆಯಿತು. ಕೊನೆಯಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡಲು ಉಭಯ ನಾಯಕರು ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ.

ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚಿಸಿದ ವಿಶ್ವನಾಯಕರು ವಿಶ್ವವ್ಯಾಪಾರ ಸ್ಥಿರಗೊಳಿಸುವಲ್ಲಿ ಭಾರತ ಮತ್ತು ಚೀನಾದ ಪಾತ್ರದ ಬಗ್ಗೆಯೂ ಚರ್ಚಿಸಿದರು. ಇದೇ ವೇಳೆ ನರೇಂದ್ರ ಮೋದಿ ಅವರು 2026ಕ್ಕೆ ಭಾರತದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಗೆ ಕ್ಸಿ ಜಿನ್‌ಪಿಂಗ್ ಅವರನ್ನು ಆಹ್ವಾನಿಸಿದರು. ಇದರೊಂದಿಗೆ ಗಡಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಬೇಕಾದ ಉಪಕ್ರಮಗಳ ಬಗ್ಗೆ ಒತ್ತಿ ಹೇಳಿದರು ಎಂದು ಮಿಶ್ರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT