ಸಿಎಂ ಪಿಣರಾಯಿ ವಿಜಯನ್ 
ದೇಶ

KIIFB ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್

2019ರಲ್ಲಿ ಫೆಮಾ ಕಾಯ್ದೆಯನ್ನು ಉಲ್ಲಂಘಿಸಿ ಮಸಾಲಾ ಬಾಂಡ್‌ಗಳ ಮೂಲಕ ಕಿಫ್‌ಬಿ ₹2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ. ಕಿಫ್‌ಬಿಯ ಮಸಾಲಾ ಬಾಂಡ್‌ನಲ್ಲಿ ಅಕ್ರಮಗಳು ನಡೆದಿವೆ ಎಂದು ಆಡಿಟರ್ ಜನರಲ್ ಈ ಹಿಂದೆ ಪ್ರಸ್ತಾಪಿಸಿದ್ದರು.

ತಿರುವನಂತಪುರ: ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ (ಕಿಫ್‌ಬಿ) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ದಾಖಲಾಗಿರುವ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ) ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

466 ಕೋಟಿ ರೂ. ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಇಸಾಕ್ ಮತ್ತು ಸಿಎಂ ಅವರ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲಯವು ನೋಟೀಸ್ ಜಾರಿ ಮಾಡಿದೆ.

ವೈಯಕ್ತಿಕ ಹಾಜರಾತಿಯ ಅಗತ್ಯವಿಲ್ಲದ ಈ ನೋಟಿಸ್ ಅನ್ನು ಫೆಡರಲ್ ತನಿಖಾ ಸಂಸ್ಥೆ ಸುಮಾರು 10-12 ದಿನಗಳ ಹಿಂದೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ದ ನಿಬಂಧನೆಗಳ ಅಡಿಯಲ್ಲಿ ನೀಡಿದೆ.

2019ರಲ್ಲಿ ಫೆಮಾ ಕಾಯ್ದೆಯನ್ನು ಉಲ್ಲಂಘಿಸಿ ಮಸಾಲಾ ಬಾಂಡ್‌ಗಳ ಮೂಲಕ ಕಿಫ್‌ಬಿ ₹2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ. ಕಿಫ್‌ಬಿಯ ಮಸಾಲಾ ಬಾಂಡ್‌ನಲ್ಲಿ ಅಕ್ರಮಗಳು ನಡೆದಿವೆ ಎಂದು ಆಡಿಟರ್ ಜನರಲ್ ಈ ಹಿಂದೆ ಪ್ರಸ್ತಾಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TMC ಎಲ್ಲಾ ಮಿತಿಗಳನ್ನು ಮೀರಿದೆ, ರಾಷ್ಟ್ರಪತಿಗಳಿಗೆ ಅವಮಾನ ನಾಚಿಕೆಗೇಡಿನ ಸಂಗತಿ: ದೀದಿ ವಿರುದ್ಧ ಮೋದಿ ಕೆಂಡ

ಇರಾನ್ ಮೇಲೆ ಇಂದು ತುಂಬಾ 'ಪ್ರಬಲ ದಾಳಿ': ಟ್ರಂಪ್ ವಾರ್ನಿಂಗ್; ಹಿಜ್ಬುಲ್ಲಾ ನಿಶ್ಯಸ್ತ್ರಗೊಳಿಸಿ- ಲೆಬನಾನ್‌ಗೆ ಇಸ್ರೇಲ್ ಎಚ್ಚರಿಕೆ!

'ರಷ್ಯಾ ತೈಲ ಖರೀದಿಗೆ 30 ದಿನಗಳ ಅನುಮತಿ ಕೊಡ್ತೀವಿ'; ಅಮೆರಿಕ ಉದ್ಧಟತನಕ್ಕೆ ಕೆರಳಿದ ಭಾರತ ಹೇಳಿದ್ದೇನು!

ಅಮೆರಿಕಾದ 300 ಮಿಲಿಯನ್ ಡಾಲರ್ ಮೌಲ್ಯದ THAAD ರಡಾರ್ ವ್ಯವಸ್ಥೆ ಇರಾನ್ ದಾಳಿಯಲ್ಲಿ ಧ್ವಂಸ!

TVK ಅಧಿಕಾರಕ್ಕೆ ಬಂದ್ರೆ ಮದುವೆಗೆ 8 ಗ್ರಾಂ ಚಿನ್ನ, ಉಚಿತ ಬಸ್, ತಿಂಗಳಿಗೆ 2,500 ರೂ.; ಭರವಸೆಗಳ ಸರಮಾಲೆಯನ್ನೇ ಘೋಷಿಸಿದ ವಿಜಯ್

SCROLL FOR NEXT