ಶಶಿ ತರೂರ್ 
ದೇಶ

Sanchar Saathi row: ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯ ಕಡ್ಡಾಯ ಮಾಡುವುದು ತೊಂದರೆದಾಯಕ; ಶಶಿ ತರೂರ್

"ನಾನು ಈ ಸಮಸ್ಯೆಯನ್ನು ವಿವರವಾಗಿ ಅಧ್ಯಯನ ಮಾಡಿಲ್ಲ. ಆದರೆ ಸಾಮಾನ್ಯವಾಗಿ ಈ ಅಪ್ಲಿಕೇಶನ್‌ಗಳು ಸ್ವಯಂಪ್ರೇರಿತವಾಗಿದ್ದರೆ ಉಪಯುಕ್ತವಾಗಬಹುದು.

ನವದೆಹಲಿ: ಸಂಚಾರ್ ಸಾಥಿ ಕಡ್ಡಾಯ ವಿವಾದ ಮಧ್ಯೆ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಮಂಗಳವಾರ, ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯ ಕಡ್ಡಾಯಗೊಳಿಸುವುದು ತೊಂದರೆದಾಯಕ ಮತ್ತು ಸರ್ಕಾರ ಆದೇಶ ಹೊರಡಿಸುವ ಮುನ್ನ ಸಾರ್ವಜನಿಕರಿಗೆ ಎಲ್ಲವನ್ನೂ ವಿವರಿಸಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಟೆಲಿಕಾಂ ಇಲಾಖೆ(DoT) ಸ್ಮಾರ್ಟ್‌ಫೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್ ಗಳಲ್ಲಿ ಸರ್ಕಾರಿ ಸೈಬರ್-ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಆ್ಯಪ್ ಅನ್ನು ಪ್ರಿ ಇನ್‌ಸ್ಟಾಲ್‌ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಇಂದು ಸಂಸತ್ತಿನ ಹೊರಗೆ ಈ ಕುರಿತು ಪ್ರತಿಕ್ರಿಯಿಸಿದ ತರೂರ್, "ನಾನು ಈ ಸಮಸ್ಯೆಯನ್ನು ವಿವರವಾಗಿ ಅಧ್ಯಯನ ಮಾಡಿಲ್ಲ. ಆದರೆ ಸಾಮಾನ್ಯವಾಗಿ ಈ ಅಪ್ಲಿಕೇಶನ್‌ಗಳು ಸ್ವಯಂಪ್ರೇರಿತವಾಗಿದ್ದರೆ ಉಪಯುಕ್ತವಾಗಬಹುದು ಎಂದು ನನಗೆ ಅನಿಸುತ್ತದೆ. ಅಗತ್ಯವಿರುವ ಪ್ರತಿಯೊಬ್ಬರೂ ಅವುಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು" ಎಂದಿದ್ದಾರೆ.

"ಪ್ರಜಾಪ್ರಭುತ್ವದಲ್ಲಿ ಏನನ್ನಾದರೂ ಕಡ್ಡಾಯಗೊಳಿಸುವುದು ತೊಂದರೆದಾಯಕ. ಆದರೆ ನಾನು ಸರ್ಕಾರದ ತರ್ಕವನ್ನು ಹೆಚ್ಚು ಗಮನಿಸಬೇಕಾಗಿದೆ. ಮಾಧ್ಯಮಗಳು ವರದಿ ಮಾಡುವ ಆದೇಶವನ್ನು ಹೊರಡಿಸುವ ಮುನ್ನ ಸರ್ಕಾರವು ಸಾರ್ವಜನಿಕರಿಗೆ ಎಲ್ಲವನ್ನೂ ವಿವರಿಸಬೇಕು. ಸರ್ಕಾರ ಈ ಕ್ರಮದ ಹಿಂದಿನ ಚಿಂತನೆ ಏನು ಎಂಬುದನ್ನು ವಿವರಿಸುವ ಚರ್ಚೆಯನ್ನು ನಾವು ನಡೆಸಬೇಕಾಗಿದೆ" ಎಂದು ತಿರುವನಂತಪುರಂ ಸಂಸದ ಹೇಳಿದ್ದಾರೆ.

"ನಮ್ಮ ಫೋನ್‌ಗಳನ್ನು ಪತ್ತೆಹಚ್ಚಲು ಸಹಾಯ ಮಾಡುವ ಅಪ್ಲಿಕೇಶನ್, ಅದು ಸ್ವಯಂಪ್ರೇರಿತವಾಗಿದ್ದರೆ, ನನಗೆ ಅದರ ಅಗತ್ಯವಿದ್ದರೆ ನಾನು ಆ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು. ನನಗೆ ಅದರ ಅಗತ್ಯವಿಲ್ಲದಿದ್ದರೆ ನಾನು ಅದನ್ನು ಡೌನ್‌ಲೋಡ್ ಮಾಡಬೇಕಾಗಿಲ್ಲ. ಇದು ನಮ್ಮೆಲ್ಲರಿಗೂ ಗೊತ್ತಿರುವ ಸತ್ಯ. ಇದು ಸಾಮಾನ್ಯ ಜ್ಞಾನ. ಸರ್ಕಾರ ಇದನ್ನು ಏಕೆ ಕಡ್ಡಾಯ ಮಾಡಿದೆ ಅಂತ ನನಗೆ ಗೊತ್ತಿಲ್ಲ" ಎಂದು ಕಾಂಗ್ರೆಸ್ ನಾಯಕ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್