ಬಿಹೆಚ್ ಯು ಕ್ಯಾಂಪಸ್ 
ದೇಶ

ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ- ವಿದ್ಯಾರ್ಥಿಗಳ ಘರ್ಷಣೆ, ಕಲ್ಲು ತೂರಾಟ; ಇಬ್ಬರ ಬಂಧನ

ಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಹಲವು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಕಲ್ಲು ತೂರಾಟ ಸಹ ನಡೆದಿದೆ.

ಲಖನೌ: ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ- ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿ, ಕಲ್ಲು ತೂರಾಟ ನಡೆದಿದ್ದು ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಹಲವು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಕಲ್ಲು ತೂರಾಟ ಸಹ ನಡೆದಿದೆ.

ಲಂಕಾ ಪೊಲೀಸ್ ಠಾಣೆಯ ಉಸ್ತುವಾರಿ ರಾಜ್ ಕುಮಾರ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು, ಬಿಹೆಚ್ ಯು ಪ್ರಾಕ್ಟೋರಿಯಲ್ ಬೋರ್ಡ್ ಅಂಕಿತ್ ಪಾಲ್ ಹಾಗೂ ಅಂಕಿತ್ ಸಿಂಗ್ ಎಂಬ ಇಬ್ಬರು ಯುವಕರನ್ನು ಪೊಲೀಸರಿಗೆ ಒಪ್ಪಿಸಿದ್ದು ದೂರು ನೀಡಿದೆ. ಈ ಘರ್ಷಣೆಯ ಬಳಿಕ ಪಿಎಸಿಯನ್ನು ಬಿಹೆಚ್ ಯು ಹಾಸ್ಟೆಲ್ ರಸ್ತೆಯಲ್ಲಿ ನಿಯೋಜಿಸಲಾಗಿದೆ ಹಾಗೂ ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

ಇದಕ್ಕೂ ಮುನ್ನ ರಾಜಾರಾಮ್ ಹಾಸ್ಟೆಲ್ ಬಳಿ ಬಿರ್ಲಾ ಸಿ ಹಾಸ್ಟೆಲ್ ನ ವಿದ್ಯಾರ್ಥಿಗೆ ಮಧ್ಯರಾತ್ರಿ ಕಾರೊಂದು ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ವಿದ್ಯಾರ್ಥಿಗಳು ದೂರು ನೀಡಲು ಹೋಗಿದ್ದಾಗ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಗಿ ಅದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಲ್ಲು ತೂರಾಟದವರೆಗೆ ಹೋಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಹಾಸ್ಟೆಲ್ ಮಾರ್ಗವನ್ನು ಸಂಪೂರ್ಣ ಸೀಲ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video