ಸಾಂದರ್ಭಿಕ ಚಿತ್ರ 
ದೇಶ

ಬಿಜಾಪುರ ಎನ್‌ಕೌಂಟರ್‌: ಮತ್ತೆ 6 ನಕ್ಸಲರ ಮೃತದೇಹ ಪತ್ತೆ; ಸಾವಿನ ಸಂಖ್ಯೆ 18ಕ್ಕೆ ಏರಿಕೆ

ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸರ ಒಂದು ಘಟಕವಾದ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಮೂವರು ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್‌ಕೌಂಟರ್‌ ನಂತರ ಮತ್ತೆ ಆರು ನಕ್ಸಲರ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೆ ಏರಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸರ ಒಂದು ಘಟಕವಾದ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಮೂವರು ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ.

ಸುಮಾರು 12 ಗಂಟೆಗಳ ಕಾಲ ನಡೆದ ದೀರ್ಘಾವಧಿಯ ಗುಂಡಿನ ಚಕಮಕಿಯ ನಂತರ, ಬುಧವಾರ ಸಂಜೆ ತಡರಾತ್ರಿಯವರೆಗೆ 12 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಇನ್ನೂ ಆರು ಶವಗಳು ಪತ್ತೆಯಾಗಿವೆ. ಇದರೊಂದಿಗೆ, ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ನಕ್ಸಲರ ಸಂಖ್ಯೆ 18ಕ್ಕೆ ಏರಿದೆ ಎಂದು ಅವರು ಹೇಳಿದರು. ಅಲ್ಲದೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದಿದ್ದಾರೆ.

ದಂತೇವಾಡ ಜಿಲ್ಲೆಯ ಪಕ್ಕದಲ್ಲಿರುವ ಗಂಗಲೂರು ಪ್ರದೇಶದ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ಆರಂಭವಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಪೊಲೀಸರ ಎರಡೂ ಘಟಕಗಳಾದ ಡಿಆರ್‌ಜಿ ಮತ್ತು ವಿಶೇಷ ಕಾರ್ಯಪಡೆ ಹಾಗೂ ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

"ನಮ್ಮ ಭದ್ರತಾ ಪಡೆಗಳು ಮಾವೋವಾದಿಗಳ ಗುಂಡಿನ ದಾಳಿಗೆ ಧೈರ್ಯದಿಂದ ಪ್ರತಿದಾಳಿ ನಡೆಸಿದವು. ಆದರೆ ದುರದೃಷ್ಟವಶಾತ್, ಬಿಜಾಪುರದ ಡಿಆರ್‌ಜಿಗೆ ಸೇರಿದ ನಮ್ಮ ಮೂವರು ಧೈರ್ಯಶಾಲಿ ಜವಾನರು ಕಾರ್ಯಾಚರಣೆಯಲ್ಲಿ ಹುತಾತ್ಮರಾದರು" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

Video: ಮೆಟ್ರೋ ರೈಲಿನಲ್ಲಿ ಮಹಿಳೆಯ ಫೋಟೋ ತೆಗೆದ ಆರೋಪ: CISF ಅಧಿಕಾರಿಗೆ ಪ್ರಯಾಣಿಕರ ತರಾಟೆ, ರಂಪಾಟ

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!