ವ್ಲಾಡಿಮಿರ್ ಪುಟಿನ್ - ಪ್ರಧಾನಿ ಮೋದಿ 
ದೇಶ

Video: ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್; ಖುದ್ದು ಪಾಲಂ ಏರ್​​ಪೋರ್ಟ್​​ಗೆ ತೆರಳಿ ಸ್ವಾಗತಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್‌ ಅವರನ್ನು ಸ್ವಾಗತಿಸಿದರು.

ನವದೆಹಲಿ: ಡಿಸೆಂಬರ್ 4 ಮತ್ತು ಡಿಸೆಂಬರ್ 5 ರಂದು ಎರಡು ದಿನಗಳ ಭಾರತ ಭೇಟಿಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಶೇಷ ವಿಮಾನದಲ್ಲಿ ಗುರುವಾರ ರಾತ್ರಿ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್‌ ಅವರನ್ನು ಸ್ವಾಗತಿಸಿದರು.

ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಅವರು ಮಾಸ್ಕೋಗೆ ಭೇಟಿ ನೀಡಿದ್ದಾಗ ರಷ್ಯಾ ಅಧ್ಯಕ್ಷ ಪುಟಿನ್ ಅವರು ನೀಡಿದ ಆತಿಥ್ಯಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ ಅವರಿಗೆ ಖಾಸಗಿ ಭೋಜನ ಕೂಟ ಆಯೋಜಿಸಿದ್ದಾರೆ.

ಪುಟಿನ್ ಅವರು ಇಂದು ರಾತ್ರಿ ದೆಹಲಿಯ ಐಟಿಸಿ ಮೌರ್ಯದಲ್ಲಿ ಉಳಿದುಕೊಳ್ಳಲಿದ್ದಾರೆ. ಹೀಗಾಗಿ, ಅಲ್ಲಿ ಭಾರಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ರಷ್ಯಾ ಅಧ್ಯಕ್ಷ ಪುಟಿನ್ ಅವರು ನಾಳೆ ಬೆಳಿಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲಿದ್ದಾರೆ.

ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯು ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ, ನಂತರ ಭಾರತದ ಉನ್ನತ ಮಟ್ಟದ ದ್ವಿಪಕ್ಷೀಯ ಕಾರ್ಯಕ್ರಮಗಳಿಗೆ ಸಾಂಪ್ರದಾಯಿಕ ಸ್ಥಳವಾದ ಹೈದರಾಬಾದ್ ಹೌಸ್‌ನಲ್ಲಿ ಮಾತುಕತೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ

ಎಸ್‌ಐಆರ್ ಕರ್ತವ್ಯಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ; ಒತ್ತಡ ಕಡಿಮೆ ಮಾಡಲು ಆದೇಶ

ಪಾಕ್ ಜತೆ ಸೂಕ್ಷ್ಮ ಮಾಹಿತಿ ಹಂಚಿಕೊಂಡ ಮಾಜಿ ಸೇನಾಧಿಕಾರಿ, ಮಹಿಳೆ ಬಂಧನ

ಅಗತ್ಯ ವಸ್ತುಗಳ ಮೇಲೆ ಆರೋಗ್ಯ, ರಾಷ್ಟ್ರೀಯ ಭದ್ರತಾ ಸೆಸ್ ಇಲ್ಲ: ರಾಜ್ಯಗಳೊಂದಿಗೆ ಆದಾಯ ಹಂಚಿಕೆ- ನಿರ್ಮಲಾ ಸೀತಾರಾಮನ್

ದೆಹಲಿ ಏರ್ ಪೋರ್ಟ್ ನಿಂದ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ!

SCROLL FOR NEXT