ರಾಹುಲ್ ಗಾಂಧಿ 
ದೇಶ

ಇಂಡಿಗೋ ವಿಮಾನಗಳ ಅವ್ಯವಸ್ಥೆಗೆ ಸರ್ಕಾರದ ಏಕಸ್ವಾಮ್ಯ ಮಾದರಿಯೇ ಕಾರಣ: ರಾಹುಲ್ ಗಾಂಧಿ ಕಿಡಿ

ಇಂಡಿಗೋ ವೈಫಲ್ಯವು ಸರ್ಕಾರದ ಏಕಸ್ವಾಮ್ಯ ಮಾದರಿಯ ಬೆಲೆಯಾಗಿದೆ. ಮತ್ತೊಮ್ಮೆ, ವಿಳಂಬ, ರದ್ದತಿ ಮತ್ತು ಅಸಹಾಯಕತೆಯಿಂದ ಸಾಮಾನ್ಯ ಭಾರತೀಯರು ಬೆಲೆ ತೆರುತ್ತಿದ್ದಾರೆ.

ನವದೆಹಲಿ: ಇಂಡಿಗೋ ವಿಮಾನದ “ವೈಫಲ್ಯ”ಕ್ಕೆ ಮೋದಿ ಸರ್ಕಾರದ “ಏಕಸ್ವಾಮ್ಯ ಮಾದರಿ”ಯೇ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತವು ಮ್ಯಾಚ್ ಫಿಕ್ಸಿಂಗ್ ಏಕಸ್ವಾಮ್ಯಗಳಲ್ಲ, ಬದಲಾಗಿ ಪ್ರತಿಯೊಂದು ವಲಯದಲ್ಲೂ ನ್ಯಾಯಯುತ ಸ್ಪರ್ಧೆಗೆ ಅರ್ಹವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಗುರುವಾರ ಇಂಡಿಗೊ 550 ಕ್ಕೂ ಹೆಚ್ಚು ವಿಮಾನಗಳು ಮತ್ತು ಶುಕ್ರವಾರ 400 ವಿಮಾನಗಳನ್ನು ರದ್ದುಗೊಳಿಸಿ ನೂರಾರು ಪ್ರಯಾಣಿಕರ ಪ್ರಯಾಣ ಯೋಜನೆಗಳನ್ನು ಅಸ್ತವ್ಯಸ್ತಗೊಳಿಸಿದ ಹಿನ್ನೆಲೆಯಲ್ಲಿ, ವಿಳಂಬ, ರದ್ದತಿ ಮತ್ತು ಅಸಹಾಯಕತೆಗೆ ಸಾಮಾನ್ಯ ಭಾರತೀಯರು ಬೆಲೆ ತೆರಬೇಕಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

“ಇಂಡಿಗೋ ವೈಫಲ್ಯವು ಸರ್ಕಾರದ ಏಕಸ್ವಾಮ್ಯ ಮಾದರಿಯ ಬೆಲೆಯಾಗಿದೆ. ಮತ್ತೊಮ್ಮೆ, ವಿಳಂಬ, ರದ್ದತಿ ಮತ್ತು ಅಸಹಾಯಕತೆಯಿಂದ ಸಾಮಾನ್ಯ ಭಾರತೀಯರು ಬೆಲೆ ತೆರುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

IPL 2026: ಡ್ರೆಸಿಂಗ್ ರೂಮ್‌ನಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ರಿಯಾನ್ ಪರಾಗ್​​ಗೆ ದಂಡ ಫಿಕ್ಸ್!

ಬೆಂಗಳೂರು ಮಳೆ ಅವಾಂತರ: ಮತ್ತೋರ್ವ ವ್ಯಕ್ತಿ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

SCROLL FOR NEXT