ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ 
ದೇಶ

I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಹಾಸ್ಟೆಲ್‌ನಲ್ಲಿ ಶನಿವಾರ ಜಾರ್ಖಂಡ್ ನಿವಾಸಿ ಕೃಷ್ಣಕಾಂತ್ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ನೋಯ್ಡಾ: ಡೆತ್ ನೋಟ್ ಬರೆದಿಟ್ಟು ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಹಾಸ್ಟೆಲ್‌ನಲ್ಲಿ ಶನಿವಾರ ಜಾರ್ಖಂಡ್ ನಿವಾಸಿ ಕೃಷ್ಣಕಾಂತ್ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಂಸಿಎ) ನ 25 ವರ್ಷದ ವಿದ್ಯಾರ್ಥಿ ಕೃಷ್ಣಕಾಂತ್ ದೆಹಲಿಯ ಬಳಿಯ ತನ್ನ ಹಾಸ್ಟೆಲ್‌ನಲ್ಲಿ "I Give Up" ಎಂದು ಬರೆದಿರುವ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರಂಭಿಕ ತನಿಖೆಯ ಸಮಯದಲ್ಲಿ, ಎರಡನೇ ವರ್ಷದ ವಿದ್ಯಾರ್ಥಿ ಕೃಷ್ಣಕಾಂತ್ ಕೋಣೆಯಲ್ಲಿ ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರಿಗೆ ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ ಕೃಷ್ಣಕಾಂತ್ ಶನಿವಾರ ಕಾಲೇಜಿಗೆ ಹೋಗಿರಲಿಲ್ಲ. ಸಹಪಾಠಿಗಳೊಂದಿಗೆ ನಂತರ ಬರುವುದಾಗಿ ಹೇಳಿದ್ದರು. ಮಧ್ಯಾಹ್ನ, ಅವರ ತಂದೆ ತಮ್ಮ ರೂಮ್‌ಮೇಟ್‌ಗೆ ಕರೆ ಮಾಡಿ ಕೃಷ್ಣಕಾಂತ್ ಏನೋ ಅನಾಹುತ ಮಾಡಿಕೊಳ್ಳತ್ತಾನೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೂಡಲೇ ರೂಮಿನ ಬಳಿ ಹೋಗು ಎಂದು ಕೇಳಿದ್ದಾರೆ.

ಈ ಮಾತನ್ನು ಕೇಳಿದ ರೂಮ್ ಮೇಟ್ ಕೂಡಲೇ ತನ್ನ ಹಾಸ್ಚೆಲ್ ಸಹಪಾಠಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಅವರು ಕೃಷ್ಣಕಾಂತ್ ತಂಗಿದ್ದ ರೂಮಿಗೆ ಧಾವಿಸಿದ್ದಾರೆ. ಆದರೆ ರೂಮಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ನಂತರ ಅವರು ಬಾಗಿಲು ಒಡೆದು ನೋಡಿದಾಗ ಕೃಷ್ಣಕಾಂತ್ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡುಬಂತು.

ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರಿಗೆ ಒಂದು ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ "ನಾನು ಶರಣಾಗುತ್ತೇನೆ. ದಯವಿಟ್ಟು ನನ್ನ ದೇಹ ಮತ್ತು ನನ್ನ ವಸ್ತುಗಳನ್ನು ನನ್ನ ಕುಟುಂಬಕ್ಕೆ ನೀಡಿ. ತೊಂದರೆಗೆ ಕ್ಷಮಿಸಿ" ಎಂದು ಬರೆಯಲಾಗಿತ್ತು.

ಇನ್ನು ರೂಮ್ ಮೇಟ್ ನನ್ನು ವಿಚಾರಿಸಿದಾಗ ಕೃಷ್ಣಕಾಂತ್ ತನಗೆ ವೈದ್ಯಕೀಯ ಸಮಸ್ಯೆಗಳಿವೆ ಎಂದು ಹೇಳಿಕೊಂಡಿದ್ದನಂತೆ. ಅಲ್ಲದೆ ಆತ ತುಂಬಾ ಸೌಮ್ಯ ಸ್ವಭಾವದ ವ್ಯಕ್ತಿ ಎಂದು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!