ನವಜೋತ್ ಕೌರ್ ಸಿಧು-ನವಜೋತ್ ಸಿಂಗ್ ಸಿಧು 
ದೇಶ

ಸಿಎಂ ಹುದ್ದೆಗೆ 500 ಕೋಟಿ ರೂ ಹೇಳಿಕೆ: ಕಾಂಗ್ರೆಸ್‌ನಿಂದ ನವಜೋತ್ ಕೌರ್ ಸಿಧು ಅಮಾನತು!

ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ಕೊಡಬೇಕು ಎಂದು ಹೇಳುವ ಮೂಲಕ ಹೈಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಸಿಧುವನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ನವದೆಹಲಿ: ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ಕೊಡಬೇಕು ಎಂದು ಹೇಳುವ ಮೂಲಕ ಹೈಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಸಿಧುವನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ನವಜೋತ್ ಕೌರ್ ಸಿಧು ಡಿಸೆಂಬರ್ 6ರಂದು '500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಹೇಳಿದ್ದು ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿತ್ತು. ಹೇಳಿಕೆ ನೀಡಿದ ಎರಡು ದಿನಗಳ ನಂತರ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ. ತರ್ನ್ ತರಣ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕರಣ್‌ಬೀರ್ ಸಿಂಗ್ ಬುರ್ಜ್‌ಗೆ ಟಿಕೆಟ್ ಕೊಡಲು 5 ಕೋಟಿ ತೆಗೆದುಕೊಳ್ಳಲಾಗಿದೆ ಎಂದು ನವಜೋತ್ ಕೌರ್ ಸಿಧು ಆರೋಪಿಸಿದ್ದರು. ಒಟ್ಟು ಮೊತ್ತ 11 ಕೋಟಿ ತಲುಪಿದೆ. ಹಿರಿಯ ನಾಯಕರ ಆಜ್ಞೆ ಮೇರೆಗೆ ಇದೆಲ್ಲಾ ನಡೆದಿತ್ತು. ಈ ಬಗ್ಗೆ ಹಲವಾರು ಕೌನ್ಸಿಲರ್‌ಗಳು ಸಾಕ್ಷ್ಯ ನೀಡಲು ಸಿದ್ಧರಿದ್ದಾರೆ. ಅವರ ಬಳಿ ದೂರವಾಣಿ ಕರೆಯ ರೆಕಾರ್ಡಿಂಗ್‌ಗಳು ಇವೆ ಎಂದು ಹೇಳಿದ್ದರು.

ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ನವಜೋತ್ ಕೌರ್ ಸಿಧು ನಂತರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ಕಾಂಗ್ರೆಸ್ ಎಂದಿಗೂ ಅವರಿಂದ ಯಾವುದೇ ಹಣವನ್ನು ಕೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ಇದಕ್ಕೂ ಮುನ್ನವೇ ಹೈಕಮಾಂಡ್ ಆಗಲೇ ಕ್ರಮ ಕೈಗೊಂಡಿತ್ತು. ಈ ವಿವಾದವು ಸಿಧು ದಂಪತಿ ಮತ್ತು ಕಾಂಗ್ರೆಸ್ ನಡುವಿನ ಸಂಬಂಧದ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ನವಜೋತ್ ಸಿಂಗ್ ಸಿಧು ಬಹಳ ಸಮಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದು ಅವರ ಪತ್ನಿಯ ಇತ್ತೀಚಿನ ಹೇಳಿಕೆಯು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!