ಏಕನಾಥ್ ಶಿಂಧೆ ಮತ್ತು ದೇವೇದ್ರ ಫಡ್ನವೀಸ್ 
ದೇಶ

ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು BMC ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸಲು ಶಿಂಧೆ- ಫಡ್ನವೀಸ್ ನಿರ್ಧಾರ!

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಶಿಂಧೆ ಸೋಮವಾರ ತಡರಾತ್ರಿ ನಡೆದ ಸಭೆಯಲ್ಲಿ, ಆಡಳಿತ ಪಕ್ಷಗಳು ಅಸ್ತಿತ್ವದಲ್ಲಿರುವ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ

ಮುಂಬಯಿ: ಭಿನ್ನಾಭಿಪ್ರಾಯ ಮರೆತು ಆಡಳಿತಾರೂಢ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಮುಂಬೈ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದ ಪುರಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಮೈತ್ರಿಕೂಟವಾಗಿ ಸ್ಪರ್ಧಿಸಲು ನಿರ್ಧರಿಸಿವೆ ಎಂದು ಶಿವಸೇನೆ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಶಿಂಧೆ ಸೋಮವಾರ ತಡರಾತ್ರಿ ನಡೆದ ಸಭೆಯಲ್ಲಿ, ಆಡಳಿತ ಪಕ್ಷಗಳು ಅಸ್ತಿತ್ವದಲ್ಲಿರುವ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ, ಆದರೆ ಪುರಸಭೆ ಚುನಾವಣೆಯ ಇನ್ನೂ ದಿನಾಂಕ ಘೋಷಿಸಲಾಗಿಲ್ಲ.

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿರುವ ನಾಗ್ಪುರದಲ್ಲಿ ಬಿಜೆಪಿ ನಾಯಕರಾದ ಚಂದ್ರಶೇಖರ್ ಬವಾಂಕುಲೆ ಮತ್ತು ರವೀಂದ್ರ ಚವಾಣ್ ಭಾಗವಹಿಸಿದ್ದ ಸಭೆಯಲ್ಲಿ, ಬಿಜೆಪಿ ಮತ್ತು ಶಿವಸೇನೆ ನಾಯಕರು ಮತ್ತು ಕಾರ್ಯಕರ್ತರಿಗೆ ಗಾಳ ಹಾಕುವುದಿಲ್ಲ ಎಂದು ಹೇಳಿದ್ದಾರೆ.

ಮುಂಬೈ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಪುರಸಭೆ ಚುನಾವಣೆಗಳನ್ನು ಒಟ್ಟಾಗಿ ಮಹಾಯುತಿ ಮೈತ್ರಿಕೂಟವಾಗಿ ಸ್ಪರ್ಧಿಸುವ ಬಗ್ಗೆ ಎರಡೂ ಪಕ್ಷಗಳ ನಾಯಕರ ನಡುವೆ ಸಕಾರಾತ್ಮಕ ಚರ್ಚೆ ನಡೆದಿದೆ" ಎಂದು ಶಿವಸೇನಾ ನಾಯಕರೊಬ್ಬರು ಹೇಳಿದರು. ಮುಂದಿನ ಎರಡು-ಮೂರು ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆಗಳು ಪ್ರಾರಂಭವಾಗಲಿವೆ ಎಂದು ಮತ್ತೊಬ್ಬ ನಾಯಕರು ತಿಳಿಸಿದ್ದಾರೆ.

ಸೋಮವಾರ ನಡೆದ ಪ್ರತ್ಯೇಕ ಸಭೆಯಲ್ಲಿ, ಮಹಾಯುತಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಟ ನಡೆಸಲಿದೆ ಎಂದು ಶಿಂಧೆ ತಮ್ಮ ಪಕ್ಷದ ಶಾಸಕರು ಮತ್ತು ಸಚಿವರಿಗೆ ತಿಳಿಸಿದರು. "ಮೈತ್ರಿ ಧರ್ಮ"ವನ್ನು ಅನುಸರಿಸಲು, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟದೊಳಗೆ ಸಂಘರ್ಷಕ್ಕೆ ಕಾರಣವಾಗುವ ಯಾವುದೇ ಹೇಳಿಕೆ ನೀಡಬಾರದು ಎಂದು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವಂದೇ ಮಾತರಂ'ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ

'ಸುಪ್ರೀಂ' ನಿವೃತ್ತ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಚಪ್ಪಲಿ ಏಟು, Video!

IndiGo is Back: ಎಲ್ಲವೂ ಸಾಮಾನ್ಯ ಸ್ಥಿತಿಗೆ, ಎಲ್ಲ ವಿಮಾನ ಸೇವೆಗಳ ಕಾರ್ಯಾಚರಣೆ ಸ್ಥಿರ: ಸಿಇಒ ಘೋಷಣೆ

ಬೆಳಗಾವಿ: 'ರೈತ ವಿರೋಧಿ' ನೀತಿ ಖಂಡಿಸಿ ಪ್ರತಿಭಟನೆ, ಸುವರ್ಣಸೌಧ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ವಶಕ್ಕೆ

ವ್ಯಾಪಕ ಅಡಚಣೆಗಳ ನಂತರ IndiGoಗೆ ವಿಪ್ ಜಾರಿ; ವೇಳಾಪಟ್ಟಿಯಲ್ಲಿ ಶೇ. 5 ರಷ್ಟು ಕಡಿತ

SCROLL FOR NEXT