ಶಿವರಾಜ್ ಪಾಟೀಲ್  
ದೇಶ

ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ

ಕೇಂದ್ರ ಸರ್ಕಾರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಚಾಕುರ್ಕರ್ ಅಲ್ಪಕಾಲದ ಅನಾರೋಗ್ಯದಿಂದ ಇಂದು ನಸುಕಿನ ಜಾವ ಲಾತೂರ್ ನಲ್ಲಿ ನಿಧನ ಹೊಂದಿದ್ದಾರೆ.

ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ತಮ್ಮ ಹುಟ್ಟೂರು ಲಾತೂರ್‌ನಲ್ಲಿ ನಿಧನರಾದರು.

90 ವರ್ಷದ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ 'ದೇವ್‌ಘರ್' ನ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ಪುತ್ರ ಶೈಲೇಶ್ ಪಾಟೀಲ್, ಸೊಸೆ ಅರ್ಚನಾ (ಬಿಜೆಪಿ ನಾಯಕ) ಮತ್ತು ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಅವರು ಲೋಕಸಭೆಯ ಮಾಜಿ ಸ್ಪೀಕರ್ ಆಗಿದ್ದರು. ಹಿಂದಿನ ಯುಪಿಎ ಸರ್ಕಾರದಲ್ಲಿ ಗೃಹ ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು ಹೊಂದಿದ್ದರು.

ಪಾಟೀಲ್ ಲಾತೂರ್ ಲೋಕಸಭಾ ಸ್ಥಾನವನ್ನು ಏಳು ಬಾರಿ ಗೆದ್ದಿದ್ದರು.

ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ 2004 ರಿಂದ 2008 ರವರೆಗೆ ಕೇಂದ್ರ ಗೃಹ ಸಚಿವರಾಗಿದ್ದರು ಮತ್ತು 1991 ರಿಂದ 1996 ರವರೆಗೆ ಲೋಕಸಭೆಯ 10 ನೇ ಸ್ಪೀಕರ್ ಆಗಿದ್ದರು. ಅವರು ಪಂಜಾಬ್‌ನ ರಾಜ್ಯಪಾಲರಾಗಿದ್ದರುಯ 2010 ರಿಂದ 2015 ರವರೆಗೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದರು.

ಅಕ್ಟೋಬರ್ 12, 1935 ರಂದು ಜನಿಸಿದ ಪಾಟೀಲ್, ಲಾತೂರ್‌ನ ಪುರಸಭೆಯ ಮುಖ್ಯಸ್ಥರಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ್ದರು. 70 ರ ದಶಕದ ಆರಂಭದಲ್ಲಿ ಶಾಸಕರಾಗಿ ಆಯ್ಕೆಯಾದರು. ನಂತರ, ಅವರು ಲಾತೂರ್ ಲೋಕಸಭಾ ಸ್ಥಾನವನ್ನು ಏಳು ಬಾರಿ ಗೆದ್ದರು. 2004 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರೂಪತೈ ​​ಪಾಟೀಲ್ ನೀಲಂಗೇಕರ್ ವಿರುದ್ಧ ಸೋತರು.

ತಮ್ಮ ಘನತೆಯ ನಡವಳಿಕೆಗೆ ಹೆಸರುವಾಸಿಯಾಗಿದ್ದ ಅವರು, ಸಾರ್ವಜನಿಕ ಭಾಷಣಗಳಲ್ಲಿ ಅಥವಾ ಖಾಸಗಿ ಸಂಭಾಷಣೆಗಳಲ್ಲಿ ಎಂದಿಗೂ ವೈಯಕ್ತಿಕ ವಾಗ್ದಾಳಿ ಮಾಡಿದವರಲ್ಲ ಎಂದು ಪಕ್ಷದ ನಾಯಕರೊಬ್ಬರು ಹೇಳುತ್ತಾರೆ.

ಪಾಟೀಲ್ ಅವರು ತಮ್ಮ ಆಳವಾದ ಅಧ್ಯಯನ, ಸೂಕ್ಷ್ಮ ತಿಳುವಳಿಕೆ ಮತ್ತು ಸ್ಪಷ್ಟ ಪ್ರಸ್ತುತಿಗೆ ಹೆಸರುವಾಸಿಯಾಗಿದ್ದರು. ಮರಾಠಿ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಅವರ ಪಾಂಡಿತ್ಯ, ಜೊತೆಗೆ ಸಾಂವಿಧಾನಿಕ ವಿಷಯಗಳಲ್ಲಿ ಅವರ ಅಸಾಧಾರಣ ಗ್ರಹಿಕೆಯು ಅವರನ್ನು ಅವರ ಕಾಲದ ಅತ್ಯಂತ ಗೌರವಾನ್ವಿತ ಸಂಸದೀಯ ಪಟುವನ್ನಾಗಿ ಮಾಡಿತ್ತು.

ಪ್ರಧಾನಿ ಸಂತಾಪ

ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಶಿವರಾಜ್ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಅನುಭವಿ ನಾಯಕರಾಗಿದ್ದರು, ಸಾರ್ವಜನಿಕ ಜೀವನದಲ್ಲಿ ತಮ್ಮ ದೀರ್ಘ ವರ್ಷಗಳಲ್ಲಿ ಶಾಸಕರು, ಸಂಸದರು, ಕೇಂದ್ರ ಸಚಿವರು, ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಹಾಗೂ ಲೋಕಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಮಾಜದ ಕಲ್ಯಾಣಕ್ಕೆ ಕೊಡುಗೆ ನೀಡುವ ಬಗ್ಗೆ ಅವರು ಉತ್ಸುಕರಾಗಿದ್ದರು. ಅವರ ಕುಟುಂಬಸ್ಥರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA!

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ; ನಿವಾಸಿಗಳನ್ನು ರಕ್ಷಿಸಿದ ಮೂವರು ಪೊಲೀಸರು!

ಮಾಗಡಿ: ಮಾಜಿ ಸಚಿವ ಎಚ್ಎಂ ರೇವಣ್ಣ ಪುತ್ರನ ಕಾರು, ಬೈಕಿಗೆ ಡಿಕ್ಕಿ; ಯುವಕ ಸಾವು

ಕೋಳಿ ಮಾಂಸ ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳಿಗೆ ಸುವೇಂದು ಅಧಿಕಾರಿಯಿಂದ 'ಸನ್ಮಾನ'

ಆಂಧ್ರಪ್ರದೇಶ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ-Video

SCROLL FOR NEXT