ಮೂರನೇ ಆರೋಪಿ ಹಿಲಾಲ್ ಅಹ್ಮದ್ 
ದೇಶ

ಪಾಕ್ ಜೊತೆಗೆ ನಂಟು: ಅರುಣಾಚಲ ಪ್ರದೇಶದಲ್ಲಿ ಮೂವರು ಕಾಶ್ಮೀರ ನಿವಾಸಿಗಳ ಬಂಧನ!

ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ 26 ವರ್ಷದ ವ್ಯಕ್ತಿಯನ್ನು ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಗುವಾಹಟಿ/ನವದೆಹಲಿ: ಪಾಕಿಸ್ತಾನ ಜೊತೆಗೆ ನಂಟು ಹೊಂದಿದ ಆರೋಪದ ಮೇರೆಗೆ ಅರುಣಾಚಲ ಪ್ರದೇಶದಲ್ಲಿ ಮೂವರು ಕಾಶ್ಮೀರದ ನಿವಾಸಿಗಳನ್ನು ಬಂಧಿಸಲಾಗಿದೆ.

ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ 26 ವರ್ಷದ ವ್ಯಕ್ತಿಯನ್ನು ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೆಲವೇ ವಾರಗಳಲ್ಲಿ ನಡೆದ ಮೂರನೇ ಬಂಧನ ಇದಾಗಿದೆ.

ಜಿಲ್ಲೆಯ ಆಲೋ ಪಟ್ಟಣದಲ್ಲಿ ವಾಸವಾಗಿದ್ದ ಆರೋಪಿ ಹಿಲಾಲ್ ಅಹ್ಮದ್ ನನ್ನು ಶುಕ್ರವಾರ ರಾತ್ರಿ ಹಿಮಾಲಯ ಗಡಿ ರಾಜ್ಯದ ಪೊಲೀಸರು ಬಂಧಿಸಿದ್ದಾರೆ. ಈತ ಪಾಕಿಸ್ತಾನದಲ್ಲಿರುವ ತಮ್ಮ ಹ್ಯಾಂಡ್ಲರ್‌ಗಳಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎನ್ನಲಾಗಿದೆ.

ಇದೇ ಪ್ರದೇಶದಲ್ಲಿ ಸೈನಿಕರ ಚಲನವಲನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿ ಕಳುಹಿಸಿದ್ದಕ್ಕಾಗಿ ಮೊದಲ ಆರೋಪಿ ನಜೀರ್ ಅಹ್ಮದ್ ಮಲಿಕ್ ನನ್ನು ನವೆಂಬರ್ 22 ರಂದು ಬಂಧಿಸಲಾಗಿತ್ತು. ಈತ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿ ಎಂಬುದು ತಿಳಿದುಬಂದಿದೆ.

ತದನಂತರ, ಎರಡನೇ ಆರೋಪಿ, ಕುಪ್ವಾರದ ನಿವಾಸಿಯೂ ಆಗಿರುವ ಸಬೀರ್ ಅಹ್ಮದ್ ಮಿರ್‌ನನ್ನು ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಿಂದ ಬಂಧಿಸಲಾಗಿತ್ತು.

ಮೂವರು ಆರೋಪಿಗಳು ಜಮ್ಮು ಮತ್ತು ಕಾಶ್ಮೀರದಿಂದ 3,000 ಕಿಮೀ ದೂರದಲ್ಲಿರುವ ಅರುಣಾಚಲ ಪ್ರದೇಶದಲ್ಲಿ ವಾಸಿಸುವ ಮೂಲಕ ಪಾಕಿಸ್ತಾನದಲ್ಲಿರುವ ತಮ್ಮ ಹ್ಯಾಂಡ್ಲರ್‌ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel