ಸಂಸದ ಶಶಿ ತರೂರ್ 
ದೇಶ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಗೆಲುವನ್ನು ಶ್ಲಾಘಿಸಿದ್ದಾರೆ.

ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿನಂದಿಸಿದ್ದಾರೆ. ಅಲ್ಲದೇ ಇದನ್ನು ಪ್ರಜಾಪ್ರಭುತ್ವದ ಸೊಗಸು ಎಂದು ಕರೆದಿದ್ದಾರೆ.

ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಗೆಲುವನ್ನು ಶ್ಲಾಘಿಸಿದ್ದಾರೆ. ತನ್ನ ಕ್ಷೇತ್ರದಲ್ಲಿ ಬಿಜೆಪಿಗೆ ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.

'ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಂತಹ ಅದ್ಭುತ ಫಲಿತಾಂಶದ ದಿನ. ಜನಾದೇಶ ಸ್ಪಷ್ಟವಾಗಿದೆ. ರಾಜ್ಯದ ಪ್ರಜಾಸತ್ತಾತ್ಮಕ ಮನೋಭಾವವು ಹೊಳೆಯುತ್ತಿದೆ ಎಂದಿದ್ದಾರೆ.

'ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನಿಜವಾದ ಪ್ರಭಾವಶಾಲಿ ಗೆಲುವಿಗಾಗಿ ಕೇರಳ ಯುಡಿಎಫ್ ಗೆ ಅಭಿನಂದನೆಗಳು. ಇದು ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯ ಸಂಕೇತವಾಗಿದೆ. 2020 ಕ್ಕಿಂತ ಉತ್ತಮ ಫಲಿತಾಂಶವನ್ನು ಸಾಧಿಸಲು ಕಠಿಣ ಪರಿಶ್ರಮ, ಬಲವಾದ ಸಂದೇಶ ಮತ್ತು ಅಧಿಕಾರ-ವಿರೋಧಿ ಎಲ್ಲವೂ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ತಿರುವನಂತಪುರಂನಲ್ಲಿ ಬಿಜೆಪಿಯ ಐತಿಹಾಸಿಕ ಸಾಧನೆಯನ್ನು ಅವರು ಒಪ್ಪಿಕೊಂಡಿದ್ದಾರೆ. 'ನಗರ ಪಾಲಿಕೆಯಲ್ಲಿ ಮಹತ್ವದ ಗೆಲುವಿಗೆ ಅವರಿಗೆ ಅಭಿನಂದನೆಗಳು. ರಾಜಧಾನಿಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯನ್ನು ಸೂಚಿಸುವ ಪ್ರಬಲ ಪ್ರದರ್ಶನ' ಎಂದಿದ್ದಾರೆ.

45 ವರ್ಷಗಳ ಎಡ ಪ್ರಜಾಸತ್ತಾತ್ಮಕ ರಂಗದ 'ದುರಾಡಳಿತ'ದಿಂದ ಬದಲಾವಣೆಗಾಗಿ ಪ್ರಚಾರ ಮಾಡಿದ್ದೇನೆ, ಆದರೆ ಮತದಾರರು ಅಂತಿಮವಾಗಿ ಆಡಳಿತದಲ್ಲಿ ಸ್ಪಷ್ಟ ಬದಲಾವಣೆಯನ್ನು ಬಯಸಿದ ಮತ್ತೊಂದು ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಅದು ಪ್ರಜಾಪ್ರಭುತ್ವದ ಸೊಗಸು, ಒಟ್ಟಾರೆ ಯುಡಿಎಫ್ ಇರಲಿ ಅಥವಾ ನನ್ನ ಕ್ಷೇತ್ರದಲ್ಲಿ ಬಿಜೆಪಿ ಇರಲಿ ಜನರ ತೀರ್ಪನ್ನು ಗೌರವಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇರಳದ ಸುಧಾರಣೆಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಜನರ ಅಗತ್ಯತೆಗಳನ್ನು ಪ್ರತಿಪಾದಿಸುತ್ತೇವೆ ಮತ್ತು ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯುತ್ತೇವೆ ಎಂದು ತಿರುವನಂತಪುರದ ಸಂಸದ ಶಶಿ ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video