ಸಂಗ್ರಹ ಚಿತ್ರ 
ದೇಶ

Vote chori ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗಿ..!

ರಾಮಲೀಲಾ ಮೈದಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿದ್ದಾರೆ.

ನವದೆಹಲಿ: ‘ವೋಟ್ ಚೋರಿ’ ವಿರುದ್ಧ ಕಾಂಗ್ರೆಸ್ ಬೃಹತ್ ಹೋರಾಟವನ್ನು ಭಾನುವಾರ ಆರಂಭಿಸಿದ್ದು, ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.

ರಾಮಲೀಲಾ ಮೈದಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿದ್ದಾರೆ.

ಪ್ರತಿಭಟನಾ ರ್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದು, ಶೀಘ್ರದಲ್ಲೇ ಈ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಇದು ನಕಲಿ ಹೋರಾಟವಾಗಿದೆ. ಲೋಕಸಭೆಯಲ್ಲಿ ಅಮಿತ್ ಶಾ ಅವರ ಉತ್ತರದ ನಂತರ, ವೋಟ್ ಚೋರಿ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ. ಎಸ್‌ಐಆರ್‌ನ ಸಂಪೂರ್ಣ ಪ್ರಕ್ರಿಯೆಯು ಮತದಾರರ ಪಟ್ಟಿಯಲ್ಲಿನ ತಪ್ಪುಗಳನ್ನು ಸರಿಪಡಿಸುವುದಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಬಹಳಷ್ಟು ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ. ಸಂವಿಧಾನದ ನಿಬಂಧನೆಗಳ ಪ್ರಕಾರ, ಭಾರತೀಯ ನಾಗರಿಕರಿಗೆ ಮಾತ್ರ ಮತದಾನದ ಹಕ್ಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ. 40ರಷ್ಟು ಹೊರೆ! ವಿಶೇಷತೆ ಏನು?

ನಿತಿನ್ ನಬಿನ್ ನೇರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ನೇಮಕ ಆಗಲಿಲ್ಲ ಏಕೆ?: ಕಾರ್ಯಾಧ್ಯಕ್ಷರ ಪಾತ್ರವೇನು?

ಮಂಡ್ಯ To ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!

Video: ಧಾರ್ಮಿಕ ಆಚರಣೆ ವೇಳೆ ಗುರಾಣಿಯಿಂದ ಬಾರಿಸಿದ ತೆಯ್ಯಂ, ಕುಸಿದು ಪ್ರಜ್ಞೆ ತಪ್ಪಿದ ಯುವಕ, ಇಷ್ಟಕ್ಕೂ ಆಗಿದ್ದೇನು?

SCROLL FOR NEXT